ಕೋವಿಡ್ ನೂತನ ಮಾರ್ಗಸೂಚಿಯಲ್ಲಿ ಬದಲಾವಣೆಯ ಪ್ರಶ್ನೆಯೇ ಇಲ್ಲ: ಡಾ.ಸುಧಾಕರ್ ಸ್ಪಷ್ಟನೆ

Prasthutha: April 3, 2021

►‘ನಮ್ಮ ಸರ್ಕಾರಕ್ಕೆ ಯಾವ ಚಟುವಟಿಕೆಗಳನ್ನು ನಿಷೇಧಿಸುವ ಉದ್ದೇಶವಿಲ್ಲ’

ಬೆಂಗಳೂರು: ಕೋವಿಡ್-19 ನ ಸಂಬಂಧ ಸರ್ಕಾರ ಎಪ್ರಿಲ್ 3 ರಂದು ನೂತನವಾಗಿ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಯ ಪ್ರಶ್ನೆಯೇ ಇಲ್ಲವೆಂದು ಸಚಿವ ಡಾ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.  ಈ ಸಂಬಂಧ ನಗರದ ಸದಾಶಿವನಗರದಲ್ಲಿ ಮಾತನಾಡಿದ ಅವರು, ಕೆಲವರು ಮಾರ್ಗಸೂಚಿ ಬದಲಾಯಿಸುವಂತೆ ಮನವಿ ಮಾಡುತ್ತಿದ್ದಾರೆ ಆದರೆ ಕೋವಿಡ್ ಸೋಂಕು ನಿಯಂತ್ರಣವಾಗದೆ ಮಾರ್ಗಸೂಚಿ ಬದಲಾವಣೆ ಇಲ್ಲವೆಂದು ಅವರು ಹೇಳಿದ್ದಾರೆ.

ಡಾ. ಸುಧಾಕರ್ ಮಾತನಾಡುತ್ತಾ, ನಾವು ಏಕಾಏಕಿ ಮಾರ್ಗಸೂಚಿ ತಂದಿಲ್ಲ. ತಾಂತ್ರಿಕ ಸಲಹಾ ಸಮಿತಿ ವರದಿ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳಲಾಗಿದೆ. ಉದ್ದೇಶಪೂರ್ವಕವಾಗಿ ಯಾವುದೇ ನಿಯಮಗಳನ್ನು ತಂದಿಲ್ಲ. ನಮ್ಮ ಸರ್ಕಾರಕ್ಕೆ ಯಾವ ಚಟುವಟಿಕೆಗಳನ್ನು ನಿಷೇಧಿಸುವ ಉದ್ದೇಶವಿಲ್ಲ. ಏ.20ರವರೆಗೂ ಈಗಿನ ಮಾರ್ಗಸೂಚಿ ಅನ್ವಯವಾಗಲಿದೆ ಎಂದರು. ಕೊರೊನಾ ಎರಡನೇ ಅಲೆ ಹೊಸ್ತಿಲಲ್ಲಿದ್ದೇವೆ. ಕೋವಿಡ್ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕಾದುದು ಅನಿವಾರ್ಯ. ನಮಗೆ ಬೇರೆ ದಾರಿಯೇ ಇಲ್ಲ. 45 ವರ್ಷ ಮೇಲ್ಪಟ್ಟವರು ದಯವಿಟ್ಟು ಲಸಿಕೆ ಪಡೆಯಬೇಕು. ಗುಂಪು ಸೇರುವುದನ್ನು ಕಡಿಮೆ ಮಾಡಿ ಮಾಸ್ಕ್ ಬಳಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!