Home ಟಾಪ್ ಸುದ್ದಿಗಳು ಪ್ರವಾದಿ ನಿಂದಕಿ ನೂಪುರ್ ಶರ್ಮಾ ವಿರುದ್ಧ ಯಾವುದೇ ಬಲವಂತದ ಕ್ರಮ ಬೇಡ: ಸುಪ್ರೀಂಕೋರ್ಟ್ ಸೂಚನೆ

ಪ್ರವಾದಿ ನಿಂದಕಿ ನೂಪುರ್ ಶರ್ಮಾ ವಿರುದ್ಧ ಯಾವುದೇ ಬಲವಂತದ ಕ್ರಮ ಬೇಡ: ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ: ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ದಾಖಲಾಗಿರುವ ಎಫ್ ಐಆರ್ ಸಂಬಂಧ ಯಾವುದೇ ಕ್ರಮಕೈಗೊಳ್ಳದಂತೆ ಸುಪ್ರೀಂಕೋರ್ಟ್ ಮಂಗಳವಾರ ಸೂಚನೆ ನೀಡಿದೆ.


ಪ್ರವಾದಿ ಮುಹಮ್ಮದ್ ಅವರ ಕುರಿತ ವಿವಾದಾಸ್ಪದ ಹೇಳಿಕೆ ಸಂಬಂಧ ತಮ್ಮ ವಿರುದ್ಧ ದೇಶದ ವಿವಿಧೆಡೆ ದಾಖಲಾಗಿರುವ 9 ಎಫ್ ಐಆರ್ ಗಳನ್ನು ಒಗ್ಗೂಡಿಸಿ ಆಲಿಸಬೇಕೆಂದು ಕೋರಿರುವ ನೂಪುರ್ ಶರ್ಮಾ ಮನವಿಯನ್ನು ಆಲಿಸಿದ ಸುಪ್ರೀಂ ಕೋರ್ಟ್. ನ್ಯಾ. ಸೂರ್ಯಕಾಂತ್ ಮತ್ತು ಜೆ ಬಿ ಪರ್ದಿವಾಲಾ ಅವರ ಪೀಠ ಈ ಆದೇಶ ನೀಡಿದೆ.

ಪ್ರಕರಣವನ್ನು ಆಗಸ್ಟ್ 10, 2022ಕ್ಕೆ ಪಟ್ಟಿ ಮಾಡಲಾಗಿದೆ. ಮುಖ್ಯ ದಾವೆಯ ಪ್ರತಿಗಳನ್ನು ಸಹ ಪ್ರತಿವಾದಿಗಳಿಗೆ ನೋಟಿಸ್‌ನೊಂದಿಗೆ ರವಾನಿಸಿ. ಸ್ಥಾಯಿ ವಕೀಲರ ಮೂಲಕ ನೋಟಿಸ್‌ ಜಾರಿಗೊಳಿಸಿ. ಈ ಅವಧಿಯಲ್ಲಿ ಮಧ್ಯಂತರ ಕ್ರಮವಾಗಿ ನೂಪುರ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಪೀಠ ಆದೇಶಿಸಿತು.
ಎಲ್ಲಾ ಎಫ್‌ಐಆರ್‌ಗಳನ್ನು ರದ್ದುಪಡಿಸುವ ಸಲುವಾಗಿ ಶರ್ಮಾ ಅವರು ಹೈಕೋರ್ಟ್‌ಗೆ ತೆರಳಲು ಅವಕಾಶ ನೀಡುವ ಆಯ್ಕೆ ಅನ್ವೇಷಿಸುವುದಾಗಿ ನ್ಯಾಯಾಲಯ ಹೇಳಿದೆ. ಕೋಲ್ಕತ್ತಾ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಪ್ರಕರಣ ದಾಖಲಾಗಿದ್ದು ಈ ಹಿನ್ನೆಲೆಯಲ್ಲಿ ನೂಪುರ್‌ ಒಂದೇ ಹೈಕೋರ್ಟನ್ನು ಸಂಪರ್ಕಿಸಲು ಅನುವಾಗುವಂತೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಲು ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ದೆಹಲಿ, ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳಿಗೆ ನೋಟಿಸ್ ಜಾರಿಗೊಳಿಸಿತು.

Join Whatsapp
Exit mobile version