ರಾಜ್ಯದ ನೆಲ, ಜಲ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ: ಗೋವಿಂದ ಕಾರಜೋಳ

Prasthutha|

ಬೆಂಗಳೂರು; ರಾಜ್ಯದ ನೆಲ, ಜಲ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ರಾಜ್ಯದ ಹಿತಾಸಕ್ತಿ ಕಾಪಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಧಾನಸಭೆಯಲ್ಲಿಂದು ಹೇಳಿದ್ದಾರೆ.

- Advertisement -

ಶೂನ್ಯ ವೇಳೆಯಲ್ಲಿ ಜೆಡಿಎಸ್ ನ ಅನ್ನದಾನಿ ಅವರು ಎಂ.ಇ.ಎಸ್ ಸಂಘಟನೆ ನಿಷೇಧಿಸುವಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 31 ರಂದು ರಾಜ್ಯ ಬಂದ್ ಗೆ ಕರೆ ನೀಡಿದ್ದು, ಸರ್ಕಾರ ಕೂಡಲೇ ಎಂ.ಇ.ಎಸ್. ನಿಷೇಧಿಸಬೇಕು ಎಂದು ಆಗ್ರಹಿಸಿದರು.

ಸದಸ್ಯರ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ಬೆಳಗಾವಿಯಲ್ಲಿ ಪುಂಡಾಟಿಕೆ ನಡೆಸಿದವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ. M E S ಸಂಘಟನೆ ನಿಷೇಧಿಸುವಂತೆ ಒತ್ತಾಯಿಸಿ, ಈ ತಿಂಗಳ 31ರಂದು ಹೋರಾಟಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರ, ರಾಜ್ಯದ ಹಿತರಕ್ಷಣೆಗೆ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.



Join Whatsapp