ಸದಾನಂದ ಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರ: ಸಿದ್ದರಾಮಯ್ಯ, ಡಿಕೆಶಿ ನಡುವೆ ಮೂಡದ ಒಮ್ಮತ

Prasthutha|

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ದೊರೆಯದೆ ಅಸಮಾಧಾನಗೊಂಡಿರುವ ಮಾಜಿ ಸಿಎಂ ಡಿವಿ ಸದಾನಂದ ಗೌಡ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

- Advertisement -


ಸದಾನಂದ ಗೌಡರ ಪಕ್ಷ ಸೇರ್ಪಡೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಧ್ಯೆ ಭಿನ್ನ ಅಭಿಪ್ರಾಯಗಳಿವೆ ಎಂದು ಮೂಲಗಳು ತಿಳಿಸುವೆ.
ಸದಾನಂದ ಗೌಡರಿಗೆ ಕಾಂಗ್ರೆಸ್ ಪಕ್ಷದಿಂದ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನೀಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಆದರೆ ಈ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಧ್ಯೆ ಇನ್ನೂ ಒಮ್ಮತದ ಅಭಿಪ್ರಾಯ ಮೂಡಿಬಂದಿಲ್ಲ.

ಮತ್ತೊಂದೆಡೆ ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ಸದಾನಂದ ಗೌಡಗೆ ನೀಡುವ ಬಗ್ಗೆ ಕೂಡ ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆ ನಡೆದಿದೆ. ಆದರೆ, ಮೈಸೂರು ಕ್ಷೇತ್ರದ ಟಿಕೆಟ್ ನೀಡುವುದನ್ನು ಸಿದ್ದರಾಮಯ್ಯ ಸಾರಾಸಗಟಾಗಿ ತಳಿಹಾಕಿದ್ದಾರೆ. ಮತ್ತೊಂದೆಡೆ ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಇಂದು ಬೆಳಗ್ಗೆ ಪತ್ರಿಕಾಗೋಷ್ಠಿ ನಡೆಸುವ ಮೂಲಕ ನಿಲುವು ತಿಳಿಸುವುದಾಗಿ ಹೇಳಿದ ಸದಾನಂದ ಗೌಡ, ಮಾಧ್ಯಮಗೋಷ್ಠಿಯನ್ನು ಮಧ್ಯಾಹ್ನಕ್ಕೆ ಮುಂದೂಡಿದ್ದಾರೆ.



Join Whatsapp