ಹಾಸನದಲ್ಲಿ ಬಿಜೆಪಿಯ ಕೆಲವರ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ: ದೇವೇಗೌಡ ಬೇಸರ

Prasthutha|

ಹಾಸನ: ಹಾಸನದಲ್ಲಿ ಬಿಜೆಪಿಯ ಕೆಲವರ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -


ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ ಎಂದು ನೀವು ಕೇಳಬಹುದು. ನಾವು ಈ ಭಾಗದ ಎಲ್ಲಾ ಕ್ಷೇತ್ರದಲ್ಲಿ ಗೆಲ್ಲುವ ಸಾಧ್ಯತೆ ಇದೆ. ಹಾಸನದಲ್ಲಿ ಬಿಜೆಪಿಯ ಕೆಲವು ವ್ಯಕ್ತಿಗಳು ಸಹಕಾರ ನೀಡದೇ ಇರುವುದು ನಿಜ. ಮಂಡ್ಯದಲ್ಲಿ ಕುಮಾರಸ್ವಾಮಿಗೆ ಸುಮಲತಾ ಸಹಾಯ ಮಾಡಿಲ್ಲ. ಹಾಗೆಂದು ಅದರಿಂದ ಕುಮಾರಸ್ವಾಮಿಗೆ ಬಹಳ ಅಪಾಯ ಆಗಿಬಿಡುತ್ತದೆ ಎನ್ನೋ ಹಾಗಿಲ್ಲ ಎಂದು ದೇವೇಗೌಡರು ಹೇಳಿದರು.


ಕಳೆದ ಎರಡು ದಿನಗಳಿಂದ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ದೊಡ್ಡ ಹೋರಾಟ ನಡೆದಿದೆ. ಸಂಪತ್ತು ಹಂಚಿಕೆ ಬಗ್ಗೆ ಎರಡು ಪಕ್ಷಗಳ ನಡುವ ದೊಡ್ಡ ಚರ್ಚೆ ನಡೆದಿದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹಲವು ವಿಚಾರ ಹೇಳಿದೆ. ಅವರು ಹೇಗಾದರೂ ಸರಿ, ಅಧಿಕಾರಿಕ್ಕೆ ಬರಬೇಕು ಎಂದು ಹೊರಟಿದ್ದಾರೆ. ಸಂಪತ್ತಿನ ಸರ್ವೇ ಹಾಗೂ ಹಂಚಿಕೆ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದಾರೆ. ರಾಹುಲ್ ಗಾಂಧಿ ಪಾಪ ಎಂದು ದೇವೇಗೌಡ ಲೇವಡಿ ಮಾಡಿದ್ದಾರೆ.

Join Whatsapp