ನವದೆಹಲಿ : ಕೋವಿಡ್ 19 ರೋಗಿಗಳ ಮನೆ ಮುಂದೆ ಪೋಸ್ಟರ್ ಅಂಟಿಸಬಾರದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ನ್ಯಾ. ಅಶೋಕ್ ಭೂಷಣ್, ನ್ಯಾ. ಆರ್. ಸುಭಾಷ್ ರೆಡ್ಡಿ, ನ್ಯಾ. ಎಂಆರ್ ಶಾ ಅವರನ್ನೊಳಗೊಂಡ ನ್ಯಾಯಪೀಠ ಈ ಮಹತ್ವದ ಆದೇಶ ನೀಡಿದೆ.
ಅಧಿಕಾರಿಗಳು ನಿರ್ದಿಷ್ಟ ಸೂಚನೆಗಳನ್ನು ನೀಡಿದ್ದಾಗ ಮಾತ್ರ ರಾಜ್ಯ ಸರಕಾರ ಅಂತಹ ಪೋಸ್ಟರ್ ಗಳನ್ನು ಅಂಟಿಸಬಹುದಾಗಿದೆ ಎಂದು ಕೋರ್ಟ್ ತಿಳಿಸಿದೆ.
ಕೋವಿಡ್ 19 ಸೋಂಕಿತರ ಮನೆ ಮುಂದೆ ಪೋಸ್ಟರ್ ಅಂಟಿಸುವುದರಿಂದ, ತಾರತಮ್ಯಕ್ಕೆ ಕಾರಣವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಪ್ರಕರಣದಲ್ಲಿ ಗೌಪ್ಯತೆಯ ಹಕ್ಕನ್ನು ಎತ್ತಿ ಹಿಡಿಯಲಾಗಿದೆ.