ರಾಜ್ಯದಲ್ಲಿ ಸದ್ಯಕ್ಕಿಲ್ಲ ಮತಾಂತರ ನಿಷೇಧ ಕಾಯ್ದೆ ಜಾರಿ

Prasthutha|

ಬೆಳಗಾವಿ : ವಿವಾದಿತ ಮತಾಂತರ ನಿಷೇಧ ವಿಧೇಯಕಕ್ಕೆ ಬೆಳಗಾವಿ ಅಧಿವೇಶನದಲ್ಲಿ ಮುಕ್ತಿ ಸಿಗುವ ಸಾಧ್ಯತೆ ಕ್ಷೀಣಿಸಿದೆ. ಬಹು ಚರ್ಚಿತವಾದ ಮತಾಂತರ ನಿಷೇಧ ವಿಧೇಯಕ ಜಾರಿ ವಿಳಂಬವಾಗುವ ಸಾಧ್ಯತೆ ಇದೆ.

- Advertisement -

ಬೆಳಗಾವಿ ಅಧಿವೇಶನದಲ್ಲೇ ವಿಧೇಯಕ ಅಂಗೀಕಾರಕ್ಕೆ ಸರಕಾರ ಮುಂದಾಗಿತ್ತು. ಆದರೆ ಇದೀಗ ಮತಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ ಸರ್ಕಾರಕ್ಕೆ ಹಿನ್ನಡೆಯಾಗಿದೆ. ತರಾತುರಿಯಲ್ಲಿ ವಿಧೇಯಕ ಜಾರಿ ಮಾಡುವುದು ಸೂಕ್ತವಲ್ಲ ಎನ್ನುವ ತಿರ್ಮಾನಕ್ಕೆ ಸರ್ಕಾರ ಬಂದಿದ್ದು, ಸಾರ್ವಜನಿಕವಾಗಿ ಚರ್ಚೆ ಆಗುತ್ತಿರುವ ವಿಧೇಯಕ ತರಲು ಹೊರಟ ಸರಕಾರದಿಂದಲೇ ಇದೀಗ ನಿಧಾನಗತಿಯ ನಡೆ ಕಂಡು ಬರುತ್ತಿದೆ.

ಆಡಳಿತಾರೂಢ ಬಿಜೆಪಿಗೆ ವಿಧಾನ ಪರಿಷತ್ ನಲ್ಲಿ ಬಹುಮತವಿರದ ಹಿನ್ನೆಲೆಯಲ್ಲಿ ವಿಧೇಯಕ ಜಾರಿ ವಿಳಂಬವಾಗುತ್ತಿದೆ ಎನ್ನಲಾಗುತ್ತಿದೆ. ವಿಧಾನ ಸಭೆಯಲ್ಲಿ ಡಿಸೆಂಬರ್ 17 ರಂದು ಮಂಡನೆಯಾಗುವ ವಿಧೇಯಕ ವಿಧಾನ ಪರಿಷತ್ ನಲ್ಲಿ ಮಂಡನೆಯಾಗಲ್ಲ. ವಿವಾದಿತ ಮತಾಂತರ ನಿಷೇಧ ಕಾಯಿದೆ ಜಾರಿಗೆ ಜೆಡಿಎಸ್ ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ವಿಳಂಬವಾಗಲಿದೆ. ವಿಧಾನಪರಿಷತ್ ನಲ್ಲಿ ವಿಧೇಯಕ ಅಂಗಿಕಾರ ಆಗುವುದಿಲ್ಲ ಎನ್ನುವುದನ್ನು ಖಚಿತಪಡಿಸಿಕೊಂಡ ಬಿಜೆಪಿ ಮುಂದಿನ ಜನವರಿಯಲ್ಲಿ ನಡೆಯುವ ಜಂಟಿ ಅಧಿವೇಶನದ ವೇಳೆಯಲ್ಲಿ ವಿಧೇಯಕ ಮಂಡನೆ ಮಾಡುವ ಚಿಂತನೆಯಲ್ಲಿದೆ.

Join Whatsapp