Home ಟಾಪ್ ಸುದ್ದಿಗಳು ಭಾರತದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಯ ಬಗ್ಗೆ ಯಾವುದೇ ಮಾಹಿತಿಯಿಲ್ಲ: ಕೇಂದ್ರ ಸಚಿವೆ ಸ್ಮೃತಿ ಇರಾನಿ

ಭಾರತದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಯ ಬಗ್ಗೆ ಯಾವುದೇ ಮಾಹಿತಿಯಿಲ್ಲ: ಕೇಂದ್ರ ಸಚಿವೆ ಸ್ಮೃತಿ ಇರಾನಿ

ನವದೆಹಲಿ: ದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಗಳ ಕುರಿತು ಕೇಂದ್ರ ಸರ್ಕಾರದ ಬಳಿ ಯಾವುದೇ ಮಾಹಿತಿ ಲಭ್ಯವಿಲ್ಲ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ರಾಜ್ಯಸಭೆಗೆ ತಿಳಿಸಿದ್ದಾರೆ.

ರಾಜ್ಯಸಭಾ ಸಂಸದ ಅಬ್ದುಲ್ ವಹಾಬ್ ಅವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ದೇಶದ ಪ್ರಮುಖ ವಿಷಯವಾಗಿದೆ ಮತ್ತು ಯಾವುದೇ ನಿರ್ದಿಷ್ಟ ಸಮುದಾಯದ ವಿರುದ್ಧ ದಾಳಿಯ ಕುರಿತ ಮಾಹಿತಿಯನ್ನು ಸರಕಾರ ಕಲೆ ಹಾಕುವುದಿಲ್ಲ ಎಂದು ತಿಳಿಸಿದರು.

ಅಲ್ಪಸಂಖ್ಯಾತರ ಮೇಲಿನ ದಾಳಿಯನ್ನು ತಡೆಯಲು ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ಮುಸ್ಲಿಮ್ ಲೀಗ್’ನ ರಾಜ್ಯಸಭಾ ಸಂಸದ ಪ್ರಶ್ನಿಸಿದ್ದರು. ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಸಂಸ್ಥೆಗಳ ಮೇಲಿನ ದಾಳಿಯ ಬಗ್ಗೆ ಸರ್ಕಾರದ ಬಳಿ ಯಾವುದೇ ದಾಖಲೆಯಿದೆಯೇ ಮತ್ತು ಇದ್ದರೆ ಅವುಗಳ ಕುರಿತು ವಿವರಗಳಿವೆಯೇ ಎಂದು ಅವರು ಪ್ರಶ್ನಿಸಿದ್ದರು.

ಭಾರತದ ಅಲ್ಪಸಂಖ್ಯಾತರಾದ ಮುಸ್ಲಿಮರು ಎದುರಿಸುತ್ತಿರುವ ಗುಂಪು ಹಿಂಸಾಚಾರ ಮತ್ತು ಬಲಪಂಥೀಯ ಹಿಂದುತ್ವ ಗುಂಪುಗಳಿಂದ ದಾಳಿಯನ್ನು ಎದುರಿಸುತ್ತಿರುವ ಮಧ್ಯೆ ಈ ಬೆಳವಣಿಗೆ ಚರ್ಚೆಯಾಗುತ್ತಿದೆ.

Join Whatsapp
Exit mobile version