Home ಟಾಪ್ ಸುದ್ದಿಗಳು ಸದ್ಯಕ್ಕೆ ರಾಜ್ಯದಲ್ಲಿ ಶಾಲಾ-ಕಾಲೇಜು ಬಂದ್ ಮಾಡುವ ನಿರ್ಧಾರ ಇಲ್ಲ: ಸಚಿವ ಬಿಸಿ ನಾಗೇಶ್

ಸದ್ಯಕ್ಕೆ ರಾಜ್ಯದಲ್ಲಿ ಶಾಲಾ-ಕಾಲೇಜು ಬಂದ್ ಮಾಡುವ ನಿರ್ಧಾರ ಇಲ್ಲ: ಸಚಿವ ಬಿಸಿ ನಾಗೇಶ್

ಬೆಂಗಳೂರು: ಸದ್ಯಕ್ಕೆ ರಾಜ್ಯದಲ್ಲಿ ಶಾಲಾ, ಕಾಲೇಜು ಬಂದ್ ಮಾಡುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಪೋಷಕರು ಯಾವುದೇ ರೀತಿ ಆತಂಕ ಪಡುವ ಅಗತ್ಯವಿಲ್ಲ. ಸದ್ಯಕ್ಕೆ ಶಾಲೆ ಮುಚ್ಚುವ ನಿರ್ಧಾರ ಶಿಕ್ಷಣ ಇಲಾಖೆಯ ಮುಂದಿಲ್ಲ. ಕೊರೋನಾ ಹೆಚ್ಚಾದರೆ ಸರ್ಕಾರದ ಸಲಹೆ ಪಡೆದು ನಿರ್ಧಾರ ಮಾಡಲಾಗುತ್ತದೆ. ಶಿಕ್ಷಣ ಇಲಾಖೆ ಆರೋಗ್ಯ ಇಲಾಖೆ ಜೊತೆ ಸಂಪರ್ಕದಲ್ಲಿದೆ. ಶಾಲೆ-ಕಾಲೇಜುಗಳಲ್ಲಿ ಸೋಂಕು ಗಂಭೀರವಾಗಿ ಹರಡಿಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜ್ಯದ ಕೆಲ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೊರೋನಾ ತಗುಲಿದೆ. ಕೊರೋನಾ ಮೂರನೇ ಅಲೆ ಮಕ್ಕಳಿಗೆ ತಗುಲುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಈ ಹಿಂದೆ ತಜ್ಞರು ತಿಳಿಸಿದ್ದರು. ಹೀಗಾಗಿ ಸರ್ಕಾರ ಮುಂಜಾಗ್ರತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದೆ. ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ.

Join Whatsapp
Exit mobile version