ಮೈಸೂರು: ಹಿಜಾಬ್ ನಿಷೇಧ ಆದೇಶವನ್ನು ಇನ್ನೂ ಹಿಂಪಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಹಿಜಾಬ್ ನಿಷೇಧ ಆದೇಶಕ್ಕೆ ಇನ್ನೂ ತೀರ್ಮಾನಿಸಿಲ್ಲ. ಯಾರೋ ಪ್ರಶ್ನೆ ಕೇಳಿದ್ರು. ಆಗ ಆದೇಶ ವಾಪಸ್ಸಿಗೆ ಯೋಚನೆ ಮಾಡುತ್ತೇನೆ ಅಂತಷ್ಟೇ ಹೇಳಿದೆ. ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡಿ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ.