ಪ್ರಧಾನಿ ಆಗುವ ಆಸೆಯಿಲ್ಲ: ಕೇಜ್ರಿವಾಲ್

Prasthutha|

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಗೆಲುವು ಸಾಧಿಸಿದರೂ, ತಮಗೆ ಪ್ರಧಾನಿಯಾಗುವ ಉದ್ದೇಶವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ಪ್ರಧಾನಿಯಾಗುವ ಉದ್ದೇಶವಿಲ್ಲ. ಸರ್ವಾಧಿಕಾರದಿಂದ ದೇಶವನ್ನು ಹಾಗೂ ಪ್ರಜಾಪ್ರಭುತ್ವವನ್ನು ರಕ್ಷಿಸುವುದೇ ತಮ್ಮ ಗುರಿ ಎಂದರು. ಒಂದು ವೇಳೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೇರಿದರೆ ವಿರೋಧ ಪಕ್ಷಗಳ ಎಲ್ಲ ನಾಯಕರೂ ಜೈಲು ಸೇರಬೇಕಾಗುತ್ತದೆ. ಚುನಾವಣಾ ವ್ಯವಸ್ಥೆಯನ್ನೇ ಹತ್ತಿಕ್ಕಲಿದೆ ಎಂದು ಆರೋಪಿಸಿದ್ದಾರೆ.

Join Whatsapp
Exit mobile version