Home ರಾಷ್ಟ್ರೀಯ ಜಾತಿ ಆಧಾರದಲ್ಲಿ ಕೈದಿಗಳ ನಡುವೆ ತಾರತಮ್ಯ ಸಲ್ಲದು: ಸುಪ್ರೀಂ

ಜಾತಿ ಆಧಾರದಲ್ಲಿ ಕೈದಿಗಳ ನಡುವೆ ತಾರತಮ್ಯ ಸಲ್ಲದು: ಸುಪ್ರೀಂ

ನವದೆಹಲಿ: ದೇಶದ ಕೆಲವು ರಾಜ್ಯಗಳ ಜೈಲು ಕೈಪಿಡಿಗಳು ಜಾತಿ ಆಧಾರಿತ ತಾರತಮ್ಯವನ್ನು ಪ್ರೋತ್ಸಾಹಿಸುತ್ತಿವೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ‘ಎಲ್ಲಾ ಜಾತಿಗಳ ಕೈದಿಗಳನ್ನು ಮಾನವೀಯ ರೀತಿಯಲ್ಲಿ ಮತ್ತು ಏಕರೂಪವಾಗಿ ಪರಿಗಣಿಸಬೇಕು’ ಎಂದು ತೀರ್ಪು ನೀಡಿದೆ.


ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯ ಮೂರ್ತಿಗಳಾದ ಜೆ.ಬಿ ಪಾರ್ದೀವಾಲಾ ಹಾಗೂ ಮನೋಜ್‌ ಮಿಶ್ರಾ ಅವರಿದ್ದ ಪೀಠವು ವಿಚಾರಣೆ ನಡೆಸಿ, ಜೈಲು ನಿಯಮಗಳ ಪ್ರಕಾರ, ಕೆಳವರ್ಗದ ಕೈದಿಗಳನ್ನು ಜಾತಿ ಆಧಾರದಲ್ಲಿ ತಾರತಮ್ಯ ಮಾಡಬಾರದು ಎಂದು ನಿರ್ದೇಶಿಸಿದೆ.

ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿನ ಜೈಲು ಕೈಪಿಡಿಗಳು ಕೈದಿಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪ್ರೋತ್ಸಾಹಿಸುತ್ತಿವೆ ಎಂದು ಆರೋಪಿಸಿ ಸುಕನ್ಯಾ ಶಾಂತ ಎನ್ನುವವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

Join Whatsapp
Exit mobile version