Home ಟಾಪ್ ಸುದ್ದಿಗಳು RSS, ಬಜರಂಗದಳ ಬ್ಯಾನ್ ಬಗ್ಗೆ ಚರ್ಚೆಯೇ ನಡೆದಿಲ್ಲ: ಸಚಿವ ಪರಮೇಶ್ವರ್

RSS, ಬಜರಂಗದಳ ಬ್ಯಾನ್ ಬಗ್ಗೆ ಚರ್ಚೆಯೇ ನಡೆದಿಲ್ಲ: ಸಚಿವ ಪರಮೇಶ್ವರ್

ಬೆಂಗಳೂರು: ಆರ್ ಎಸ್ ಎಸ್, ಬಜರಂಗದಳ ನಿಷೇಧಿಸುವ ಬಗ್ಗೆ ಚರ್ಚೆಯೇ ನಡೆದಿಲ್ಲ ಎಂದು ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.


ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯ ಸಂಪುಟದ ಕೆಲ ಸಚಿವರು RSS ಬ್ಯಾನ್ ಮಾಡುತ್ತೇವೆ. ಬಜರಂಗದಳವನ್ನು ನಿಷೇಧಿಸುತ್ತೇವೆ ಎಂದು ನೇರವಾಗಿ ಹೇಳಿಕೆಗಳನ್ನು ಕೊಡುತ್ತಿದ್ದರೆ, ಇತ್ತ ಸಚಿವ ಜಿ. ಪರಮೇಶ್ವರ್ ಮಾತ್ರ ಈ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಿ. ಪರಮೇಶ್ವರ್, ನಾವು ಪ್ರಣಾಳಿಕೆಯಲ್ಲಿ ಬಜರಂಗದಳ ಮತ್ತು ಪಿಎಫ್ ಐಗೆ ಸಂಬಂಧಿಸಿದಂತೆ ಹೇಳಿದ್ದೆವು. ಒಂದು ವೇಳೆ ಅವರು ಶಾಂತಿಗೆ ಭಂಗ ತಂದರೆ, ನಾವು ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ, ಅಗತ್ಯವಿದ್ದರೆ ಅವರನ್ನು ನಿಷೇಧಿಸುವ ಮಟ್ಟಕ್ಕೂ ಹೋಗುತ್ತೇವೆ ಎಂದು ಹೇಳಿದ್ದೇವು. ಅದನ್ನು ಬಿಟ್ಟರೆ ಈ ಬಗ್ಗೆ ಚರ್ಚೆ ನಡೆದಿಲ್ಲ. ಕೆಲವರು ವೈಯಕ್ತಿಕವಾಗಿ ತಮ್ಮ ಅಭಿಪ್ರಯಾವನ್ನು ಹೇಳಿರಬಹುದು ಎಂದು ಹೇಳಿದ್ದಾರೆ.

Join Whatsapp
Exit mobile version