ಹುಬ್ಬಳ್ಳಿ ಗಲಾಟೆ ಪ್ರಕರಣ ವಾಪಸ್ ಪಡೆಯೋ ಚರ್ಚೆಯೇ ಆಗಿಲ್ಲ: ಪರಮೇಶ್ವರ್

Prasthutha|

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಾಟೆ ಪ್ರಕರಣವನ್ನು ವಾಪಸ್ ಪಡೆಯುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಈ ವಿಚಾರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿ.ಕೆ ಶಿವಕುಮಾರ್ ಶಿಫಾರಸ್ಸು ಪತ್ರದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಪತ್ರದಲ್ಲಿ ತಪ್ಪೇನು ಇಲ್ಲ. ಆದರೆ ಈ ಬಗ್ಗೆ ಚರ್ಚೆಯಾಗಿಲ್ಲ. ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಎಂದರು.


ಶಾಸಕರು ಹಾಗೂ ಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದ್ದರೆ ಅದನ್ನು ನಮಗೆ ಕಳುಹಿಸಿ ಕೊಡ್ತಾರೆ. ಆ ಮನವಿ ನನಗೆ ಅಥವಾ ನಮ್ಮ ಇಲಾಖೆಗೆ ಬರುತ್ತದೆ. ಆಗ ನಾವು ಅದನ್ನ ಕ್ಯಾಬಿನೆಟ್ ಸಬ್ ಕಮಿಟಿಯಲ್ಲಿ ಇಟ್ಟು ಪರಿಶೀಲಿಸುತ್ತೇವೆ. ಸಂಪೂರ್ಣವಾಗಿ ಪರಿಶೀಲನೆ ಮಾಡಿ, ಯಾವ ಸೆಕ್ಷನ್ ಹಾಕಿದ್ದಾರೆ. ಕಾನೂನು ಪ್ರಕಾರ ಇದನ್ನು ವಾಪಾಸ್ ಪಡೆಯಬೇಕೆ? ಇಲ್ಲವೇ ಮುಂದುವರೆಸ ಬೇಕೆ? ಎಂಬ ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ.