ಕಾಂಗ್ರೆಸ್’ನಲ್ಲಿ ಯಾವುದೇ ಅಸಮಾಧಾನವಿಲ್ಲ: ಶಾಸಕ ಲಕ್ಷ್ಮಣ ಸವದಿ

Prasthutha|

ಬೆಳಗಾವಿ: ಹೊಸ ಸರ್ಕಾರ ರಚನೆಯಾದ ಮೇಲೆ ಶಾಸಕರ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳಿಗೆ ತಿಳಿಸುವುದು ವಾಡಿಕೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯ ಕಾಂಗ್ರೆಸ್ ನಾಯಕರ ಸಭೆ ಕರೆದಿದ್ದರಿಂದ ಶಾಸಕಾಂಗ ಪಕ್ಷದ ಸಭೆ ಮುಂದಕ್ಕೆ ಹೋಗಿತ್ತು. ಈಗ ಮತ್ತೆ ಸಭೆ ಕರೆಯಬೇಕಿದೆ. ಕಾಂಗ್ರೆಸ್ ನಲ್ಲಿ ಯಾವುದೇ ಅಸಮಾಧಾನವಿಲ್ಲ. ವಿರೋಧ ಪಕ್ಷದವರು ಮಾಡಿದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.

- Advertisement -


ಅಧಿವೇಶನ ಮುಗಿದರೂ ರಾಷ್ಟ್ರೀಯ ಪಕ್ಷವಾದ ಬಿಜೆಪಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ವಿಪಕ್ಷ ನಾಯಕನಿಲ್ಲದೆ ಅಧಿವೇಶನ ನಡೆದಿರುವುದು ದುರಂತದ ಕಥೆ. ಇಂಥದ್ದೊಂದು ಬೆಳವಣಿಗೆ ನಡೆದಿರುವುದು ಇತಿಹಾಸದಲ್ಲಿ ಇದೇ ಮೊದಲು. ಇಂತಹ ಇತಿಹಾಸವನ್ನು ಬಿಜೆಪಿಯವರು ಬರೆಯುತ್ತಾರೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ಲಕ್ಷ್ಮಣ ಸವದಿ, ಜಗದೀಶ ಶೆಟ್ಟರ್ ಅವರಿಗೆ ಟಾಸ್ಕ್ ನೀಡಿದ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸವದಿ, ‘ಅದು ಟಾಸ್ಕ್ ಅಲ್ಲ. ಒಂದು ಪಕ್ಷದಲ್ಲಿದ್ದಾಗ ಓಡಾಡಿ ಕೆಲಸ ಮಾಡಬೇಕು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಸ್ಟ್ 2ರಂದು ಸಭೆ ಕರೆದಿದ್ದಾರೆ. ಆ ಸಭೆಗೆ ಹೋಗುತ್ತೇವೆ. ಅಲ್ಲಿ ನಮಗೆ ಕೊಡುವ ಜವಾಬ್ದಾರಿ ನಿಭಾಯಿಸುತ್ತೇವೆ’ ಎಂದು ತಿಳಿಸಿದರು.

Join Whatsapp