Home ಟಾಪ್ ಸುದ್ದಿಗಳು ಆಪರೇಷನ್ ಹಸ್ತದ ಯಾವ ನಾಟಕವೂ ವರ್ಕೌಟ್ ಆಗಲ್ಲ: ಅಶ್ವತ್ಥನಾರಾಯಣ

ಆಪರೇಷನ್ ಹಸ್ತದ ಯಾವ ನಾಟಕವೂ ವರ್ಕೌಟ್ ಆಗಲ್ಲ: ಅಶ್ವತ್ಥನಾರಾಯಣ

ಬೆಂಗಳೂರು: ಆಪರೇಷನ್ ಹಸ್ತ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ, ಕಾಂಗ್ರೆಸ್ ನವರಿಗೆ ಅವರ ಪಕ್ಷದವರನ್ನೇ ಉಳಿಸಿಕೊಳ್ಳಲು ಆಗುತ್ತಿಲ್ಲ ಎಂದು ಲೇವಡಿ ಮಾಡಿದರು.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ಸಚಿವರು, ಶಾಸಕರು ಸರ್ಕಾರದ ವಿರುದ್ಧವೇ ಮಾತನಾಡುತ್ತಿದ್ದಾರೆ. ಮೂರು ತಿಂಗಳಲ್ಲೇ ಅವರ ಸರ್ಕಾರದಲ್ಲಿ ಹಲವು ಸಮಸ್ಯೆಗಳಿವೆ. ಇಂತಹವರೇ ಆಪರೇಷನ್ ಹಸ್ತದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.


ಅಲ್ಲದೇ, ಇವರ ಯಾವ ನಾಟಕವೂ ಇನ್ನು ವರ್ಕೌಟ್ ಆಗಲ್ಲ. ಇವರ ರಾಜಕೀಯ ತಂತ್ರಗಳು ನಡೆಯಲ್ಲ. ನನಗೆ ಗೊತ್ತಿರುವ ಪ್ರಕಾರ ಬಿಜೆಪಿಯಿಂದ ಯಾರೂ ಕಾಂಗ್ರೆಸ್ ಗೆ ಹೋಗುವುದಿಲ್ಲ. ಕಾಂಗ್ರೆಸ್ ಸರ್ಕಾರ ಸಂಪೂರ್ಣ ನಿಷ್ಕ್ರಿಯ ಆಗಿದೆ. ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಬಂದಿದೆ. ಕಾಂಗ್ರೆಸ್ ಮುಳುಗುತ್ತಿರುವ ಪಕ್ಷ, ಅಲ್ಲಿಗೆ ಯಾರೂ ಹೋಗಲ್ಲ ಎಂದು ಟೀಕಿಸಿದರು.

Join Whatsapp
Exit mobile version