9, 10, 11ನೇ ತರಗತಿ ವಿದ್ಯಾರ್ಥಿಗಳಿಗೂ ಪರೀಕ್ಷೆ ಇಲ್ಲ; ಎಲ್ಲರೂ ಪಾಸ್!

Prasthutha|

ಚೆನ್ನೈ : ಕಳೆದ ಶೈಕ್ಷಣಿಕ ವರ್ಷದಲ್ಲಿ ಕೊರೊನ ವೈರಸ್ ಸಾಂಕ್ರಾಮಿಕ ರೋಗದ ಹಾವಳಿ ಹೆಚ್ಚು ಇದ್ದುದರಿಂದ 1 ರಿಂದ 9 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಪಾಸ್ ಮಾಡಲಾಗಿತ್ತು. ಈಗ ಮತ್ತೊಮ್ಮೆ ಕೊರೊನದ ಎರಡನೇ ಅಲೆ ಪ್ರಾರಂಭಗೊಂಡಿದ್ದು, ಆತಂಕವಿನ್ನೂ ಕಡಿಮೆಯಾಗಲಿಲ್ಲ. ಆದ್ದರಿಂದ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ  ಈ ಸಾಲಿನ 9,10,11  ನೇ ತರಗತಿ ವಿದ್ಯಾರ್ಥಿಗಳಿಗೂ ಪರೀಕ್ಷೆ ಇಲ್ಲದೆ ಪಾಸ್ ಮಾಡುವಂತಹ ನಿರ್ಧಾರಕ್ಕೆ ತಮಿಳುನಾಡು ಸರಕಾರ ಮುಂದಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವೈದ್ಯರು, ತಜ್ಞರ ಸಲಹೆ ಮೇರೆಗೆ ಈ ನಿರ್ಧಾರ ಕೈಗೊಂಡಿದ್ದೇವೆ. ಸದ್ಯದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದು ಕಷ್ಟಸಾಧ್ಯ. ಹೀಗಾಗಿ 9,10 ಮತ್ತು 11 ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ನಡೆಸದೇ ಮುಂದಿನ ತರಗತಿಗೆ ಪಾಸು ಮಾಡಿದ್ದೇವೆ ಎಂದು ಸಿ.ಎಂ. ಹೇಳಿದ್ದಾರೆ.

- Advertisement -

ಇನ್ನು, ವಿದ್ಯಾರ್ಥಿಗಳು ಇಂಟರ್ನಲ್ ಅಸೆಸ್ಮ್ಂಟ್ ನಲ್ಲಿ ತೆಗೆದಿರುವ ಅಂಕಗಳ ಆಧಾರದ ಮೇಲೆ ಅವರ ಮೌಲ್ಯಮಾಪನ ಮಾಡಲಾಗುತ್ತದೆ. ತ್ರೈಮಾಸಿಕ ಮತ್ತು ಅರ್ಧವಾರ್ಷಿಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ಅಂಕಗಳ ಆಧಾರದ ಮೇಲೆ ಶೇ.80ರಷ್ಟು ಅಂಕಗಳನ್ನು ನೀಡಲಾಗುತ್ತದೆ. ಇನ್ನುಳಿದ ಶೇ.20ರಷ್ಟು ಅಂಕಗಳು ವಿದ್ಯಾರ್ಥಿಗಳ ಹಾಜರಾತಿಯನ್ನು ಅವಲಂಬಿಸಿರುತ್ತದೆ.

ತಮಿಳುನಾಡು ಸರ್ಕಾರವು 12 ನೇ ತರಗತಿ ಪರೀಕ್ಷೆಗಳನ್ನು ನಡೆಸಲಿದೆ. ಇದಕ್ಕಾಗಿ ತಮಿಳುನಾಡು ಸರ್ಕಾರಿ ಪರೀಕ್ಷೆಗಳ ನಿರ್ದೇಶನಾಲಯ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

- Advertisement -