ವಿದ್ಯಾರ್ಥಿಗಳಿಗೆ ಬಿಗ್ ನ್ಯೂಸ್ | 1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್ !

Prasthutha|

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ 1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದುಗೊಳಿಸಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಹೀಗಾಗಿ 1ರಿಂದ 9ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಲ್ಲದೇ ಪಾಸ್ ಮಾಡಲು ನಿರ್ಧರಿಸಲಾಗಿದೆ. ಕೋವಿಡ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, 1-9ನೇ ತರಗತಿವರೆಗೆ ಮೌಲ್ಯಾಂಕನ ಮೂಲಕ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

- Advertisement -

ಕಳೆದ ಹಲವು ಸಮಯಗಳಿಂದಲೂ 1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದೇ? ಬೇಡವೇ ಎಂಬ ಬಗ್ಗೆ ಚರ್ಚೆ ನಡೆಯುತ್ತಲೇ ಇತ್ತು. ಹಲವು ಗೊಂದಲಕಾರಿ ಹೇಳಿಕೆಗಳು, ನಡೆಗಳ ಬಳಿಕ ಇದೀಗ ಶಿಕ್ಷಣ ಇಲಾಖೆ ಕೊನೆಗೂ ಅಂತಿಮ ನಿರ್ಧಾರ ಪ್ರಕಟಿಸಿದ್ದು, ವಿದ್ಯಾರ್ಥಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

Join Whatsapp