ಮೋದಿ ಹೆಸರಿನಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದ ಕೇಂದ್ರ ಸಚಿವ!

Prasthutha|

ಚಂಡೀಗಢ: ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು ಹೇಳಿದ ಮಾತ್ರಕ್ಕೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ರಾವ್ ಇಂದರ್ಜಿತ್ ಸಿಂಗ್ ಹೇಳಿದ್ದಾರೆ.

- Advertisement -

ಹರಿಯಾಣದಲ್ಲಿ ನಡೆದ ಬಿಜೆಪಿ ಆಂತರಿಕ ಸಭೆಯಲ್ಲಿ ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ರಾವ್ ಇಂದರ್ಜಿತ್ ಸಿಂಗ್ ಈ ಹೇಳಿಕೆ ನೀಡಿದ್ದಾರೆ. ಹರಿಯಾಣದಲ್ಲಿ 2024ರ ವೇಳೆ ವಿಧಾನಸಭಾ ಚುನಾವಣೆ ನಡೆಯಲಿದೆ.

“ನಮಗೆ ನರೇಂದ್ರ ಮೋದಿಯವರ ಆಶೀರ್ವಾದವಿದೆ. ಆದರೆ ಹರಿಯಾಣದಲ್ಲಿ ಮೋದಿ ಹೆಸರು ಹೇಳಿ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಜನರು ಮೋದಿಯ ಹೆಸರು ಹೇಳಿ ಮತ ಪಡೆಯಬಹುದೆಂದು ನಾವು ಭಾವಿಸಿರಬಹುದು. ಆದರೆ ತಳಮಟ್ಟದಲ್ಲಿ ಕೆಲಸ ಮಾಡುವ ಬಿಜೆಪಿ ಕಾರ್ಯಕರ್ತರ ಪರಿಶ್ರಮದಿಂದ ಫಲಿತಾಂಶವನ್ನು ನಿರೀಕ್ಷಿಸಬಹುದೆಂದು ಅವರು ಹೇಳಿದರು.

- Advertisement -

ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಮೋದಿ ಹೆಸರು ಹೇಳಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಿರುವುದು ಬಿಜೆಪಿಗೆ ಭಾರೀ ಮುಜುಗರವನ್ನುಂಟು ಮಾಡಿತ್ತು.



Join Whatsapp