ಬಿಜೆಪಿಯವರಿಗೆ ನಿಜವಾದ ರಾಮಭಕ್ತಿ ಇದ್ದರೆ ಪಕ್ಷಾತೀತವಾಗಿ ಆಹ್ವಾನ ನೀಡಿ: ಮಂಕಾಳ ವೈದ್ಯ

Prasthutha|

ಕಾರವಾರ: ರಾಮ ಮಂದಿರ ಉದ್ಘಾಟನೆ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡಲು ಮುಂದಾಗಿರುವುದು ಸರಿಯಲ್ಲ. ಬಿಜೆಪಿಯವರಿಗೆ ನಿಜವಾದ ರಾಮಭಕ್ತಿ ಇದ್ದರೆ ಪಕ್ಷಾತೀತವಾಗಿ ಆಹ್ವಾನ ನೀಡಿ ಎಲ್ಲರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದು ಸಚಿವ ಮಂಕಾಳ ವೈದ್ಯ ಒತ್ತಾಯಿಸಿದರು.

- Advertisement -

ಮಂಗಳವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ‘ನಾನೂ ರಾಮ ಭಕ್ತ. ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದೇನೆ. ಆಹ್ವಾನ ಬಂದರೂ ಬಾರದಿದ್ದರೂ ಅಯೋಧ್ಯೆಗೆ ತೆರಳುತ್ತೇನೆ. ಜ.22ಕ್ಕೆ ಹೋಗಲು ಪ್ರಯತ್ನಿಸುತ್ತಿದ್ದೇನೆ. ಆಗ ಆಗದಿದ್ದರೆ ನಂತರವಾದರೂ ತೆರಳಿ ರಾಮನ ದರ್ಶನ ಪಡೆಯುತ್ತೇನೆ’ ಎಂದರು.

Join Whatsapp