ರಾಜ್ಯ ಸರ್ಕಾರದಿಂದ ಯಾವುದೇ ಮದ್ಯದ ದರ ಏರಿಕೆ ಮಾಡಿಲ್ಲ: ಸಚಿವ ಆರ್.ಬಿ.ತಿಮ್ಮಾಪುರ

Prasthutha|

ಬೆಂಗಳೂರು: ರಾಜ್ಯ ಸರ್ಕಾರದಿಂದ ಯಾವುದೇ ಮದ್ಯದ ದರ ಏರಿಕೆ ಮಾಡಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ.

- Advertisement -

ಮಾಧ್ಯಮದೊಂದಿಗೆ ಮಾತನಾಡಿದ ಅವರು ‘ಮದ್ಯ ಉತ್ಪಾದಕರು ದರ ಹೆಚ್ಚಳ ಮಾಡಿರಬಹುದು. ಆದರೆ, ನಾವಂತೂ ಹೆಚ್ಚಿಸಿಲ್ಲ. ಅಬಕಾರಿ ಶುಲ್ಕ ಹೆಚ್ಚಳ ಮಾಡೋದಾದರೆ ಮೊದಲೇ ಹೇಳುತ್ತೇವೆ. ಇನ್ನು ಬಜೆಟ್ ನಲ್ಲೂ ಸದ್ಯ ತೆರಿಗೆ ಹೆಚ್ಚಳದ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಯಾವುದೇ ಟಾರ್ಗೆಟ್ ಕೂಡ ನೀಡಿಲ್ಲ, ಆದರೆ, ಆದಾಯ ಸಂಗ್ರಹದ ಗುರಿ ಇದೆ ಎನ್ನುವ ಮೂಲಕ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ.

Join Whatsapp