Home ಟಾಪ್ ಸುದ್ದಿಗಳು ಬಸ್ ಪ್ರಯಾಣ ದರ ಹೆಚ್ಚಳ ಇಲ್ಲ: ಸಿದ್ದರಾಮಯ್ಯ

ಬಸ್ ಪ್ರಯಾಣ ದರ ಹೆಚ್ಚಳ ಇಲ್ಲ: ಸಿದ್ದರಾಮಯ್ಯ

ಬಳ್ಳಾರಿ: ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಜಿಲ್ಲೆಯ ತೋರಣಗಲ್ನ ಜಿಂದಾಲ್ ಏರ್ಪೋರ್ಟ್‌ನಲ್ಲಿ ಸುದ್ದಿಗಾರರು ಡೀಸೆಲ್ ಪೆಟ್ರೋಲ್ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಾರಿಗೆ ಬಸ್ ದರ ಹೆಚ್ಚಳ ಮಾಡಲಾಗುತ್ತದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದರು. ಈ ವರ್ಷ ಗ್ಯಾರಂಟಿ ಯೋಜನೆಗಳಿಗಾಗಿ 60 ಸಾವಿರ ಕೋಟಿ ಅನುದಾನ ಮೀಸಲಿರಿಸಿದ್ದು, ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದು ಇದೇ ಸಂದರ್ಭ ಹೇಳಿದರು.

Join Whatsapp
Exit mobile version