ಬಿಟ್ ಕಾಯಿನ್ ಪ್ರಕರಣವನ್ನು ಜಾರಿ ನಿರ್ದೇಶನಾಲಯಕ್ಕೆ ವಹಿಸಿರುವ ಮಾಹಿತಿಯಿಲ್ಲ : ಸಚಿವ ಜೆ.ಸಿ. ಮಾಧುಸ್ವಾಮಿ

Prasthutha|

ಬೆಂಗಳೂರು : ಬಿಟ್ ಕಾಯಿನ್ ಪ್ರಕರಣವನ್ನು ಜಾರಿ ನಿರ್ದೇಶನಾಲಯಕ್ಕೆ ವಹಿಸಿರುವ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ಕಾನೂನು ಸಚಿವರಿಗೇ ಈ ಕುರಿತು ಮಾಹಿತಿ ಇಲ್ಲ ಎನ್ನುವ ವಿಚಾರ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

- Advertisement -

ಬಿಟ್ ಕಾಯಿನ್ ವಿಚಾರದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಈ ವಿಚಾರವನ್ನು ಮುಖ್ಯಮಂತ್ರಿ ಅವರಿಗೆ ಕೇಳಿ ಎಂದರು.

ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಂದು ನಡೆದ ಕ್ಯಾಬಿನೆಟ್ ನಲ್ಲಿ ಬಿಟ್ ಕಾಯಿನ್ ವಿಚಾರ ಚರ್ಚೆಯಾಗಿಲ್ಲ. ಈ ವಿಚಾರ ನಮ್ಮ ಕಾರ್ಯಸೂಚಿಯಲ್ಲಿ ಇರಲಿಲ್ಲ ಎಂದು ಹೇಳಿದರು.

- Advertisement -

ಸಾರ್ವಜನಿಕವಾಗಿ ಚರ್ಚೆಯಾಗುವ ವಿಷಯಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲು ಸಾಧ್ಯವಿಲ್ಲ. ಅನೌಪಚಾರಿಕವಾಗಿಯೂ ಈ ವಿಷಯ ಚರ್ಚೆಯಾಗಿಲ್ಲ ಎಂದು ಸಚಿವ ಜೆ.ಸಿ. ಮಾಧು ಸ್ವಾಮಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ಜಾರಿ ನಿರ್ದೇಶನಾಲಯಕ್ಕೆ ವಹಿಸಿರುವ ಬಗ್ಗೆಯೇ ತಮ್ಮ ಬಳಿ ವಿವರಗಳಿಲ್ಲ. ಯಾವ ದಿನಾಂಕದಂದು ಕೊಟ್ಟಿದ್ದಾರೆಯೋ ಅದೂ ಸಹ ಗೊತ್ತಿಲ್ಲ. ಆಗ ತಾವು ಕಾನೂನು ಸಚಿವರು ಸಹ ಆಗಿರಲಿಲ್ಲ. ಬೊಮ್ಮಾಯಿ ಅವರೇ ಕಾನೂನು ಸಚಿವರಾಗಿದ್ದರು. ಹೀಗಾಗಿ ಅವರೇ ನಿಮಗೆ ಉತ್ತರ ಕೊಡುತ್ತಾರೆ ಎಂದು ಎಂದ ಸಚಿವ ಮಾಧುಸ್ವಾಮಿ ಹೇಳಿದರು.



Join Whatsapp