Home ಟಾಪ್ ಸುದ್ದಿಗಳು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಲಾಕ್ ಡೌನ್ ಮಾಡುವುದಿಲ್ಲ : ಆರೋಗ್ಯ ಸಚಿವ ಡಾ. ಕೆ. ಸುಧಾಕರ್...

ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಲಾಕ್ ಡೌನ್ ಮಾಡುವುದಿಲ್ಲ : ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಪುನರುಚ್ಚಾರ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುತ್ತೇವೆ. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರುವುದಿಲ್ಲ. ಈಗಾಗಲೇ ಎರಡು ಬಾರಿ ಲಾಕ್ ಡೌನ್ ನಿಂದ ಸಾಕಷ್ಟು ಆರ್ಥಿಕ ಸಮಸ್ಯೆ ಜನರಿಗೆ ಉಂಟಾಗಿರುವ ಅರಿವು ಸರಕಾರಕ್ಕೆ ಇದೆ. ಹೀಗಾಗಿ ಲಾಕ್ ಡೌನ್ ಉದ್ದೇಶ ಸರಕಾರದ ಮುಂದಿಲ್ಲ ಎಂದು ಹೇಳಿದರು.

ಫೆಬ್ರವರಿ ಅಂತ್ಯದ ವೇಳೆಗೆ ಕೋವಿಡ್ ಸಂಖ್ಯೆ ಇಳಿಮುಖ ಆಗುತ್ತದೆ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಜನರು ಒಂದೂವರೆ ತಿಂಗಳ ಕಾಲ ಅತ್ಯಂತ ಎಚ್ಚರಿಕೆಯಲ್ಲಿ ಇರಬೇಕು ಎಂದು ಮನವಿ ಮಾಡಿದ ಸಚಿವರು, ಫೆಬ್ರವರಿ ಮೊದಲ ವಾರದಲ್ಲಿ ಅತ್ಯಧಿಕ  ಕೋವಿಡ್ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಮೂರು ಮತ್ತು ನಾಲ್ಕನೇ ವಾರದಲ್ಲಿ ಇದು ಕಡಿಮೆಯಾಗುತ್ತಾ ಹೋಗುತ್ತದೆ ಎಂದು ತಜ್ಞರು ಅಭಿಪ್ರಾಯ ನೀಡಿದ್ದಾರೆ. ಹೀಗಾಗಿ ಸರಕಾರ ಕೂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದರು.

ಜನರಿಗೆ ಸಮಸ್ಯೆ ಉಂಟು ಮಾಡುವ ನಿಯಮ ಜಾರಿ ಮಾಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

Join Whatsapp
Exit mobile version