ಲಾಕ್‌ಡೌನ್ ಇಲ್ಲ | ನಾಳೆಯಿಂದ ಮಾಸ್ಕ್ ಕಡ್ಡಾಯ ; ನಿಯಮ ಉಲ್ಲಂಘಿಸಿದರೆ ದಂಡ, ಕಠಿಣ ಕ್ರಮ : ಯಡಿಯೂರಪ್ಪ

Prasthutha|

ಬೆಂಗಳೂರು : ನಾಳೆಯಿಂದ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿದೆ. ನಿಯಮ ಪಾಲಿಸದಿದ್ದರೇ ದಂಡ ವಿಧಿಸಲಾಗುತ್ತದೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಮಾಡುವುದಿಲ್ಲ. ಮುಂದಿನ 15 ದಿನಗಳ ವರೆಗೆ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ, ರ್ಯಾಲಿಗೆ ಅವಕಾಶವಿಲ್ಲ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ವೈಜ್ಞಾನಿಕ ರೀತಿಯಲ್ಲಿ ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ತಿಳಿಸಿದ್ದಾರೆ. ಆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದ್ದೇವೆ. ನಿಯಂತ್ರಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

- Advertisement -

ಕೊರೋನಾ ನಿಯಂತ್ರಣ ಕುರಿತಂತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಏಪ್ರಿಲ್ 5ರಿಂದ ಕಾರ್ಯಾರಂಭ ಮಾಡುವಂತೆ ಸಜ್ಜುಗೊಳಿಸಲಾಗಿದೆ. ಕೋವಿಡ್ ಪರೀಕ್ಷೆ ಹೆಚ್ಚಳ ಮಾಡಲು ತಂಡ ರಚಿಸಲಾಗಿದೆ. ಅನುದಾನಕ್ಕಾಗಿ 1,500ಕೋಟಿ ಮೀಸಲು ಇಡಲಾಗಿದೆ. ಕೊರೋನಾ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಬೇಕು.

ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ಗಳಲ್ಲಿ ಬೇರೆ ಬೇರೆ ರೀತಿಯ ಪಾರ್ಟಿ ಮಾಡೋದಕ್ಕೆ ಕಡಿವಾಣ ಹಾಕಲಾಗುತ್ತಿದೆ. ಮೈಸೂರು, ಕಲಬರ್ಗಿ, ದಕ್ಷಿಣ ಕನ್ನಡ, ಉಡುಪಿಯಲ್ಲಿ ತುಂಬಾ ಪಾಸಿಟಿವ್ ಕೇಸ್ ಬರ್ತಾ ಇದೆ. ಇದನ್ನು ತಡೆಯೋದಕ್ಕೆ ನಿಯಂತ್ರಣ ಕ್ರಮ ಕೈಗೊಳ್ಳಲಾಗಿದೆ ಎಂದರು.

Join Whatsapp