ಮೂವರು ಡಿಸಿಎಂ ಆಯ್ಕೆ ವಿಚಾರ ಹೈಕಮಾಂಡ್ ಮುಂದೆ ಇಲ್ಲ: ಸಚಿವ ಪ್ರಿಯಾಂಕ್ ಖರ್ಗೆ

Prasthutha|

ಕಲಬುರಗಿ: ಮೂವರು ಡಿಸಿಎಂ ಆಯ್ಕೆ ವಿಚಾರ ಕಾಂಗ್ರೆಸ್ ಹೈಕಮಾಂಡ್ ಮುಂದೆ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

- Advertisement -


ಮೂರು ಜನ ಉಪಮುಖ್ಯಮಂತ್ರಿಗಳನ್ನು ಮಾಡಬೇಕು ಎನ್ನುವ ಸಚಿವ ರಾಜಣ್ಣ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಅದು ರಾಜಣ್ಣ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಎಲ್ಲರಿಗೂ ಹೈಕಮಾಂಡ್ ಮುಂದೆ ತಮ್ಮ ಅಭಿಪ್ರಾಯ ಹೇಳಲು ಸ್ವಾತಂತ್ರ್ಯವಿದೆ. ಹೀಗಾಗಿ, ಮೂವರು ಡಿಸಿಎಂ ಅಂತಾದರೂ ಹೇಳಲಿ ಐವರು ಡಿಸಿಎಂ ಅಂತಾದರೂ ಹೇಳಲಿ, ಅದು ಅವರಿಗೆ ಬಿಟ್ಟದ್ದು. ಆದರೆ ನನಗೆ ಗೊತ್ತಿರುವ ಮಾಹಿತಿಯ ಪ್ರಕಾರ ಹೈಕಮಾಂಡ್ ಮುಂದೆ ಇಂತಹ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದರು.