Home ಟಾಪ್ ಸುದ್ದಿಗಳು ಯಾವ ಸಚಿವರೂ ನಮ್ಮ ಬಳಿ ಕಮಿಷನ್ ಕೇಳಿಲ್ಲ: ಸರ್ಕಾರಕ್ಕೆ ಕ್ಲೀನ್ ಚೀಟ್ ನೀಡಿದ ಗುತ್ತಿಗೆದಾರರ ಸಂಘದ...

ಯಾವ ಸಚಿವರೂ ನಮ್ಮ ಬಳಿ ಕಮಿಷನ್ ಕೇಳಿಲ್ಲ: ಸರ್ಕಾರಕ್ಕೆ ಕ್ಲೀನ್ ಚೀಟ್ ನೀಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

ಬೆಂಗಳೂರು: ಸರ್ಕಾರದ ವಿರುದ್ಧ ನಾವು ಯಾರೂ ಕಮಿಷನ್ ಆರೋಪ ಮಾಡಿಲ್ಲ. ಯಾರೋ ಮೂರನೇ ವ್ಯಕ್ತಿ ಆರೋಪ ಮಾಡಿರಬಹುದು. ಕೆಲವೊಂದಿಷ್ಟು ಹಣ ಬಿಡುಗಡೆ ಕೂಡ ಆಗಿದೆ. ಏಳು ತಿಂಗಳ ಕಾಮಗಾರಿಯ ಬಾಕಿ ಹಣ ಬರಬೇಕು. ಬಾಕಿ ಬಿಲ್ ಪಾವತಿಗೆ ಈಗಾಗಲೇ ಸಿಎಂ ಬಳಿ ನಾವು ಮನವಿ ಮಾಡಿದ್ದೇವೆ. ನಮಗೆ ಯಾವ ಸಚಿವರು ಕಮಿಷನ್ ಕೇಳಿಲ್ಲ. ಕಮಿಷನ್ ಕೇಳಿದ್ದಾರೆ ಎಂದು ಗುತ್ತಿಗೆದಾರರು ನನ್ನ ಬಳಿ ಹೇಳಿಲ್ಲ ಎಂದು ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸ್ಪಷ್ಟಪಡಿಸಿದರು.

ಈ ಮೂಲಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಆರೋಪಿಸುತ್ತಿರುವ ಕಮಿಷನ್ ಆರೋಪಕ್ಕೆ ಕೆಂಪಣ್ಣ ಅವರು ಕ್ಲೀನ್ ಚೀಟ್ ನೀಡಿದರು.


ಬೆಂಗಳೂರಿನಲ್ಲಿ ಇಂದು ಸುದ್ದಿಗರರೊಂದಿಗೆ ಮಾತನಾಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಈಗಾಗಲೇ ಏಳು ತಿಂಗಳಿಂದ ಬಾಕಿ ಬರಬೇಕು. ಈಗಾಗಲೇ ಕೆಲವಷ್ಟು ಹಣ ಬಿಡುಗಡೆ ಆಗಿದೆ. ನೂರು ಕೋಟಿ ರೂ. ಸಾಲಲ್ಲ. ಸಿಎಂ ಬಳಿ ಮನವಿ ಮಾಡಿದ್ದೇವೆ. ಅವರು ಎಷ್ಟು ತಿಂಗಳು ಅಂತ ಕೇಳಿದ್ರು. ಅದಕ್ಕೆ ಮೂರು ವರ್ಷದಿಂದ ಅಂತ ಹೇಳಿದ್ದೇವೆ. ಅದಕ್ಕೆ ಅವರು ನಾನು ಬಂದು ಮೂರು ತಿಂಗಳಾಗಿದೆ. ನಮ್ಮ ಕುತ್ತಿಗೆ ಮೇಲೆ ಕೂತಿದ್ದೀರಿ ಅಂದ್ರು. ಕಂಟ್ರಾಕ್ಟರ್ಸ್ ಸೂಸೈಡ್ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ ಅಂತ ಹೇಳಿದ್ದೇವೆ. ಯಾವ ಸಚಿವರು ಕಮಿಷನ್ ಕೇಳಿಲ್ಲ. ನಮಗೆ ರಾಜ್ಯಾದ್ಯಂತ ಮಾಹಿತಿ ಬಂದಿದೆ. ಯಾರೋ ಮೂರನೇ ವ್ಯಕ್ತಿ ಹೇಳುತ್ತಿರುವುದು ಸಂಬಂಧವಿಲ್ಲ ಎಂದು ಹೇಳಿದರು.

Join Whatsapp
Exit mobile version