ಬೆಂಗಳೂರು: ಯಾವ ಶಾಸಕರೂ ಜೆಡಿಎಸ್ ಬಿಟ್ಟು ಹೋಗುವುದಿಲ್ಲ. ಇದೆಲ್ಲ ಬರೀ ಊಹಾಪೋಹ ಅಷ್ಟೇ ಎಂದು ಪಕ್ಷಾಂತರ ವದಂತಿಗಳ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ತಿಂಗಳು 10 ರಂದು ಒಂದು ಸಭೆ ನಡೆಸುತ್ತೇನೆ. ಅದಕ್ಕೆ ಎಲ್ಲಾ ಜಿಲ್ಲೆಗಳಿಂದ ಕಾರ್ಯಕರ್ತರು ಹಾಜರಾಗಲಿದ್ದಾರೆ ಎಂದರು. ಜತೆಗೆ, ಈ ತೊಂಭತ್ತೊಂದರ ವಯಸ್ಸಿನಲ್ಲಿ ಯಾರೂ ನನ್ನ ಕೈಬಿಡಬೇಡಿ ಎಂದು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದರು.