Home ಟಾಪ್ ಸುದ್ದಿಗಳು ಮತಾಂತರ ತಡೆಗೆ ಹೊಸದಾಗಿ ಕಾನೂನು ತರಬೇಕಾದ ಅಗತ್ಯವಿಲ್ಲ: ಸಿದ್ದರಾಮಯ್ಯ

ಮತಾಂತರ ತಡೆಗೆ ಹೊಸದಾಗಿ ಕಾನೂನು ತರಬೇಕಾದ ಅಗತ್ಯವಿಲ್ಲ: ಸಿದ್ದರಾಮಯ್ಯ

ಬೆಂಗಳೂರು; ರಾಜ್ಯದಲ್ಲಿ ಮತಾಂತರ ತಡೆಯಲು ಈಗಾಗಲೇ ಸಾಕಷ್ಟು ಕಾಯ್ದೆ, ಕಾನೂನುಗಳು ಜಾರಿಯಲ್ಲಿದೆ. ಹೊಸದಾಗಿ ತರಬೇಕಾದ ಅಗತ್ಯವಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.


ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ತರುತ್ತಿರುವ ಮಸೂದೆಯನ್ನು ಕಾಂಗ್ರೆಸ್ ಪಕ್ಷ ವಿರೋಧ ಮಾಡಲಿದೆ ಎಂದು ಹೇಳಿದರು.
ವಿಧಾನ ಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗವೂ ಸೇರಿದಂತೆ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕು ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ಸಿದ್ದರಾಮಯ್ಯ ಹೇಳಿದರು.

Join Whatsapp
Exit mobile version