Home ಟಾಪ್ ಸುದ್ದಿಗಳು LPG, ಇಂಧನ ಬೆಲೆ ಏರಿಕೆಗೆ ಚಿಂತೆ ಮಾಡುವ ಅಗತ್ಯವಿಲ್ಲ: ಗೋವಾ ಸಿಎಂ ಪತ್ನಿ

LPG, ಇಂಧನ ಬೆಲೆ ಏರಿಕೆಗೆ ಚಿಂತೆ ಮಾಡುವ ಅಗತ್ಯವಿಲ್ಲ: ಗೋವಾ ಸಿಎಂ ಪತ್ನಿ

ಪಣಜಿ: ಎಲ್ ಪಿಜಿ ಮತ್ತು ಇಂಧನ ಬೆಲೆ ಏರಿಕೆ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪತ್ನಿ ಸುಲಕ್ಷಣಾ ಸಾವಂತ್ ಹೇಳಿದ್ದಾರೆ.

ರಾಜ್ಯದಲ್ಲಿ ತೈಲಬೆಲೆ, ಸಿಲಿಂಡರ್ ಗಳು ಮತ್ತು ಹಾಲಿನ ಬೆಲೆ ಏರಿಕೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸುಲಕ್ಷಣಾ ಸಾವಂತ್,  ಬೆಲೆ ಏರಿಕೆಯನ್ನು ಸ್ವಲ್ಪ ಸಮಯದವರೆಗೆ ಸಹಿಸಿಕೊಳ್ಳಬೇಕಾಗುತ್ತದೆ. ಬೆಲೆಗಳು ಕೇವಲ ರಾಜ್ಯದಲ್ಲಿ ಮಾತ್ರವಲ್ಲ, ಪ್ರಪಂಚದಾದ್ಯಂತ ಏರಿಕೆಯಾಗಿದೆ. ಬೆಲೆ ಏರಿಕೆಗೆ ಪರಿಹಾರವೊಂದು ಇದ್ದೇ ಇರುತ್ತದೆ. ಬೆಲೆ ಏರಿಕೆಯನ್ನು ಕಡಿಮೆ ಮಾಡಲು ಸರ್ಕಾರ ಸಾಮಾಜಿಕ ಯೋಜನೆಗಳಿಗೆ ಒತ್ತು ನೀಡಿದೆ. ಈ ವಿಚಾರವಾಗಿ ಚಿಂತೆಪಡುವ ಅಗತ್ಯವಿಲ್ಲ ಎಂದಿದ್ದಾರೆ.

Join Whatsapp
Exit mobile version