Home ಕರಾವಳಿ ಮಳೆ ಮುಗಿಯುವವರೆಗೂ ಹೊಸ ನಿರ್ಮಾಣ ಕಾಮಗಾರಿ ಆರಂಭಿಸುವಂತಿಲ್ಲ: ಮನಪಾ ಆದೇಶ

ಮಳೆ ಮುಗಿಯುವವರೆಗೂ ಹೊಸ ನಿರ್ಮಾಣ ಕಾಮಗಾರಿ ಆರಂಭಿಸುವಂತಿಲ್ಲ: ಮನಪಾ ಆದೇಶ

ಮಂಗಳೂರು: ಇದೇ ತಿಂಗಳ 17 ರಿಂದ 19ರ ವರೆಗೆ ಭಾರಿ ಮಳೆಯಾಗುವ ಸಂಭವವಿರುವುದರಿಂದ ಹಾಗೂ ಜೂನ್ ತಿಂಗಳಾರಂಭದಲ್ಲಿ ಮುಂಗಾರು ಪ್ರಾರಂಭವಾಗುವುದರಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳದಂತೆ, ಮಳೆಗಾಲ ಪೂರ್ಣಗೊಂಡ ನಂತರ ಆ ಕಾಮಗಾರಿಗಳನ್ನು ಪ್ರಾರಂಭಿಸುವಂತೆ ಮಹಾನಗರ ಪಾಲಿಕೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.


ಗುಡ್ಡ ಅಗೆದು ನಿವೇಶನ ಸಮತಟ್ಟು ಗೊಳಿಸುವುದರಿಂದ ಗುಡ್ಡ ಕುಸಿದು ಸಾರ್ವಜನಿಕರಿಗೆ ತೊಂದರೆಯಾಗಲಿದೆ, ಆದ ಕಾರಣ ಗುಡ್ಡ ಅಗೆದು ನಿವೇಶನವನ್ನು ಸಮತಟ್ಟುಗೊಳಿಸಿ ಮಣ್ಣು ಸಾಗಾಟ ಮಾಡುವುದನ್ನು ಈ ಸಂದರ್ಭದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.


ಮುಖ್ಯವಾಗಿ ಈಗಾಗಲೇ ಆರಂಭಿಸಿರುವ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಅಕ್ಕಪಕ್ಕದ ನಿವೇಶನಕ್ಕೆ ಹಾನಿಯಾಗದಂತೆ ಎಚ್ಚರಿಕೆ ವಹಿಸುವುದು ಮತ್ತು ತಗ್ಗು ಪ್ರದೇಶವಿರುವ ಸಂದರ್ಭದಲ್ಲಿ ಯಾವುದೇ ಅನಾಹುತವಾಗದ ಹಾಗೆ ತಡೆಗೋಡೆ ನಿರ್ಮಿಸಿ ಸೂಕ್ತ ರೀತಿಯಲ್ಲಿ ಭದ್ರಪಡಿಸಬೇಕು, ತಪ್ಪಿದಲ್ಲಿ ಕೆ.ಎಂ.ಸಿ ಕಾಯ್ದೆಯಂತೆ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp
Exit mobile version