Home ಟಾಪ್ ಸುದ್ದಿಗಳು ಕರ್ನಾಟಕದಲ್ಲಿ ಹೊಸ ಮದ್ಯದಂಗಡಿ ತೆರೆಯುವುದಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಕರ್ನಾಟಕದಲ್ಲಿ ಹೊಸ ಮದ್ಯದಂಗಡಿ ತೆರೆಯುವುದಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಚಿತ್ರದುರ್ಗ: ಕರ್ನಾಟಕದಲ್ಲಿ ಈಗಿರುವ ಮದ್ಯದಂಗಡಿಗಳ ಹೊರತಾಗಿ ಹೊಸದಾಗಿ ಯಾವುದೇ ಮದ್ಯದಂಗಡಿಗಳನ್ನು ತೆರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಇಂದು (ಅಕ್ಟೋಬರ್ 06) ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಮ್ಮ ಸರ್ಕಾರ ಮದ್ಯದ ಅಂಗಡಿ ತೆಗೆಯಲ್ಲ. ಬಿಜೆಪಿ ಆಡಳಿತದಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳಾಗಿದೆ. ನಮ್ಮ ಅವಧಿಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಗ್ಯಾರಂಟಿ ಯೋಜನೆ, ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದರೊಂದಿಗೆ ಎಲ್ಲಾ ಗೊಂದಲಗಳಿಗೆ ತೆರೆ ಎಳೆದರು.

Join Whatsapp
Exit mobile version