ಎಂಜಿ ರಸ್ತೆ, ಬ್ರಿಗೇಡ್, ಮುಂತಾದ ರಸ್ತೆಯಲ್ಲಿ ಹೊಸವರ್ಷ ಸಂಭ್ರಮಾಚರಣೆ ಇಲ್ಲ: ಹೊಸ ಮಾರ್ಗ ಸೂಚಿ ಬಿಡುಗಡೆ

Prasthutha|

ಬೆಂಗಳೂರು : ಕೋವಿಡ್‌ ಹೊಸ ರೂಪಾಂತರಿ ತಳಿ ಒಮಿಕ್ರೋನ್‌ ಹರಡುವುದನ್ನು ತಡೆಯುವ ದೃಷ್ಟಿಯಿಂದ ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ ಸೇರಿದಂತೆ ರಾಜ್ಯಾದ್ಯಂತ ಯಾವುದೇ ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಗೆ ಜನರು ಗುಂಪುಗೂಡಿ ಸಂಭ್ರಮಿಸುವುದನ್ನು ನಿರ್ಬಂಧಿಸಲು ಸರ್ಕಾರ ನಿರ್ಧರಿಸಿದೆ.

- Advertisement -

ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ ಸೇರಿದಂತೆ ರಾಜ್ಯಾದ್ಯಂತ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಜನರು ದೊಡ್ಡ ಮಟ್ಟದಲ್ಲಿ ಗುಂಪುಗೂಡಿ ಸಂಭ್ರಮಾಚರಿಸುವಂತಿಲ್ಲ. ಹೋಟೆಲ್‌, ರೆಸ್ಟೋರೆಂಟ್‌, ಕ್ಲಬ್‌, ಬಾರ್‌, ಮಾಲ್‌ಗಳು ಮತ್ತಿತರೆಡೆ ಪಾರ್ಟಿ, ಡಿಜೆ ಸೇರಿದಂತೆ ಯಾವುದೇ ಸಂಗೀತ ಕಾರ್ಯಕ್ರಮ, ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಬಾರದು ಎಂಬ ನಿರ್ಬಂಧ ವಿಧಿಸಲು ತೀರ್ಮಾನಿಸಲಾಗಿದೆ.

ಆದರೆ, ಈ ಸ್ಥಳಗಳಲ್ಲಿ ಗ್ರಾಹಕರ ಪ್ರವೇಶಕ್ಕೆ ಇರುವ ಸಾಮರ್ಥ್ಯದ ಶೇ.50ರಷ್ಟುಜನರಿಗೆ ಮಾತ್ರ ಅವಕಾಶ ನೀಡಬಹುದು. ಇಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಕಡ್ಡಾಯವಾಗಿ ಕೋವಿಡ್‌ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಸಿ ನೆಗೆಟಿವ್‌ ವರದಿ ಹೊಂದಿರಬೇಕು. ಇಲ್ಲಿಗೆ ಬರುವ ಜನರು ಕಡ್ಡಾಯವಾಗಿ ಎರಡೂ ಡೋಸ್‌ ಕೋವಿಡ್‌ ಲಸಿಕೆ ಪಡೆದಿರಬೇಕೆಂಬ ಷರತ್ತು ವಿಧಿಸಲಾಗಿದೆ. ಈ ಎಲ್ಲಾ ನಿರ್ಬಂಧಗಳನ್ನು ಡಿ.30ರಿಂದ 2022ರ ಜನವರಿ 2ರವರೆಗೆ ಅನ್ವಯಿಸಿ ಪ್ರತ್ಯೇಕ ಮಾರ್ಗಸೂಚಿಯನ್ನೂ ಹೊರಡಿಸಿದೆ.

Join Whatsapp