ಇ.ಡಿ.ಯಿಂದ ಯಾವುದೇ ನೋಟಿಸ್ ಬಂದಿಲ್ಲ, ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಬಂದಿದ್ದೇನೆ: ಜಮೀರ್ ಅಹ್ಮದ್

Prasthutha|

ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಶನಿವಾರ ದೆಹಲಿಗೆ ದಿಢೀರ್ ಭೇಟಿ ನೀಡಿದ್ದಾರೆ.

- Advertisement -


ದೆಹಲಿ ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಇ.ಡಿ.ಯಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
‘ಇಡಿಯಿಂದ ನೋಟಿಸ್ ಬಂದಿದೆ ಎನ್ನುವುದು ಸುಳ್ಳು. ವೈಯಕ್ತಿಕ ಕೆಲಸಕ್ಕೆ ಬಂದಿದ್ದೇನೆ. ನೋಟಿಸ್ ಬಂದರೆ ಮಾಧ್ಯಮಗಳಿಗೆ ತೋರಿಸಿಯೇ ಬರುವೆ’ ಎಂದಿದ್ದಾರೆ.


‘ನನ್ನ ಆಸ್ತಿಯೆಂದರೆ ನನ್ನ ಜನ. ನಾನು ರಾಜಕೀಯ ಜೀವನದಲ್ಲಿ ಇರುವವರೆಗೆ ನನ್ನ ಜನ ತಲೆತಗ್ಗಿಸುವಂಥ ಯಾವ ಕೆಲಸವನ್ನೂ ಮಾಡುವುದಿಲ್ಲ. ನನ್ನ ಆಸ್ತಿಯೂ ಅವರೇ. ಇ.ಡಿ ದಾಳಿಯಿಂದ ಹಲವರ ಅನುಮಾನಗಳು ಪರಿಹಾರವಾದದ್ದೇ ನನಗೆ ಖುಷಿಯ ವಿಚಾರ’ ಎಂದು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
‘ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವುದು ನನ್ನ ಅಭಿಪ್ರಾಯ, ನೀವು ತಿರುಚ ಬೇಡಿ’ ಎಂದೂ ಮಾಧ್ಯಮ ಪ್ರತಿನಿಧಿಗಳಿಗೆ ಜಮೀರ್ ಹೇಳಿದ್ದಾರೆ.



Join Whatsapp