Home ಟಾಪ್ ಸುದ್ದಿಗಳು ಸಂವಿಧಾನವನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ: ದೇವೇಂದ್ರ ಫಡ್ನವಿಸ್

ಸಂವಿಧಾನವನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ: ದೇವೇಂದ್ರ ಫಡ್ನವಿಸ್

ಮುಂಬೈ: ಸಂವಿಧಾನವನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಭಾರತೀಯ ಜನತಾ ಪಕ್ಷದ ನಾಯಕ, ಮಹಾರಾಷ್ಡ್ರ ಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ಪೂರ್ವ ಮಹಾರಾಷ್ಟ್ರದ ಅಕೋಲಾ ಲೋಕಸಭಾ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಅನುಪ್ ಧೋತ್ರೆ ನಾಮಪತ್ರ ಸಲ್ಲಿಸುವ ಮೊದಲು ನಡೆದ ರ್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸಂವಿಧಾನ ನೀಡಿರುವ ಹಕ್ಕುಗಳಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಹುದ್ದೆಗೆ ತಲುಪಿದ್ದಾರೆ ಎಂದು ಹೇಳಿದರು.

ಕೇಸರಿ ಪಡೆ ಸಂವಿಧಾನವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ ಎಂದು ವಿಪಕ್ಷಗಳು ಆಗಾಗ್ಗೆ ಆರೋಪಿಸುತ್ತಿವೆ. ಆದರೆ ಈ ನಿರೂಪಣೆಗೆ ಯಾವುದೇ ಆಧಾರವಿಲ್ಲ. ಚಂದ್ರ, ಸೂರ್ಯ ಮತ್ತು ನಕ್ಷತ್ರಗಳು ಇರುವವರೆಗೆ ಯಾರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

Join Whatsapp
Exit mobile version