CAA ಜಾರಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್‌ ಶಾ

Prasthutha|

ಕೋಲ್ಕತ್ತ: ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದೇ ತರುತ್ತೆ, ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಲೋಕಸಭಾ ಚುನಾವಣೆಗೆ ಬಿಜೆಪಿ ಅಣಿಯಾಗಿದ್ದು, ಈ ಸಂಬಂಧ ನಡೆದ ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಅಮಿತ್ ಶಾ ಮಾತನಾಡಿದರು.

- Advertisement -

ಸಿಎಎ ಜಾರಿಯಾಗುವುದನ್ನು ಮಮತಾ ಬ್ಯಾನರ್ಜಿ ವಿರೋಧಿಸುತ್ತಾ ಬಂದಿದ್ದಾರೆ. ಆದರೆ ಯಾರೊಬ್ಬರೂ ಕಾಯ್ದೆ ತಡೆಯಲು ಸಾಧ್ಯವಿಲ್ಲ. ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯು ಕೇಂದ್ರ ಸರ್ಕಾರ ಕಾಯ್ದೆ ಜಾರಿ ಮಾಡಿಯೇ ತೀರುತ್ತೆ ಎಂದ ಅಮಿತ್ ಶಾ, 2024ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸಾಧನೆ ಮಾಡಲಿದ್ದು, 2026ರ ವಿಧಾನಸಭಾ ಚುನಾವಣೆಯ ಗೆಲುವಿಗೆ ಅದು ಅಡಿಪಾಯ ಹಾಕಲಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಮೇಲೆ ತುಷ್ಟೀಕರಣ, ಭ್ರಷ್ಟಾಚಾರ ಮತ್ತು ರಾಜಕೀಯ ಹಿಂಸಾಚಾರ, ಒಳ ನುಸುಳುವಿಕೆ ವಿಚಾರದಲ್ಲಿ ತೀವ್ರ ವಾಗ್ದಾಳಿ ನಡೆಸಿದ ಅಮಿತ್ ಶಾ, ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವಂತೆ ಸೂಚಿಸಿದ್ದಾರೆ. ಇಲ್ಲಿ ನೆರದಿರುವ ಜನಸ್ತೋಮವನ್ನು ನೋಡಿದರೆ ಇದು ಬಿಜೆಪಿಯ ಪರ ಜನರ ಒಲವನ್ನು ಸೂಚಿಸುತ್ತದೆ. 2026ರಲ್ಲಿ ರಾಜ್ಯದಲ್ಲಿ ಬಿಜೆಪಿ 3ನೇ ಎರಡರಷ್ಟು ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಬಿಜೆಪಿಯ ಸಾಧನೆಯು 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗೆ ಅಡಿಪಾಯವಾಗಿದೆ ಎಂದು ಹೇಳಿದ್ದಾರೆ.

- Advertisement -

2019ರ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ 42 ಕ್ಷೇತ್ರಗಳ ಪೈಕಿ ಬಿಜೆಪಿ 18 ಕ್ಷೇತ್ರಗಳಲ್ಲಿ ಮಾತ್ರ ಗೆಲವು ಕಂಡಿತ್ತು.



Join Whatsapp