ಜಾತಿ ಗಣತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ರಾಹುಲ್ ಗಾಂಧಿ

Prasthutha|

ನವದೆಹಲಿ: ಜಾತಿ ಗಣತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶೇ 90ರಷ್ಟು ಭಾರತೀಯರಿಗೆ ಅನ್ಯಾಯವಾಗುತ್ತಿದೆ. ಜಾತಿ ಗಣತಿಯ ಮೂಲಕ ಈ ಅನ್ಯಾಯವನ್ನು ತಡೆಯಬೇಕೆಂದು ನಾನು ಕರೆ ನೀಡಿದ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ನನ್ನ ಮೇಲೆ ಮುಗಿಬಿದ್ದರು’ ಎಂದು ವಾಗ್ದಾಳಿ ನಡೆಸಿದ್ದಾರೆ.


‘ದೇಶದ ಶೇ 90ರಷ್ಟು ಜನರು ಜಾತಿ ಗಣತಿ ಬಗ್ಗೆ ಅರ್ಥಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಖಂಡಿತವಾಗಿ ಜಾತಿ ಗಣತಿ ನಡೆಸುತ್ತೇವೆ. ದೇಶದಲ್ಲಿ ದೊಡ್ಡ ಉದ್ಯಮಗಳಿಗೆ ಸಹಾಯ ಮಾಡಬಾರದು ಎಂದು ನಾನು ಹೇಳುತ್ತಿಲ್ಲ. ಆದರೆ, ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದ್ದೆ. ಜತೆಗೆ, ಒಬಿಸಿ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಏನು ಮಾಡಿದೆ’ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.



Join Whatsapp