ಬಿಜೆಪಿ-ಜೆಡಿಎಸ್ ಮೈತ್ರಿ ನೂರಕ್ಕೆ ನೂರರಷ್ಟು ನಡೆಯುತ್ತದೆ: ಜಿ.ಟಿ.ದೇವೇಗೌಡ

Prasthutha|

‘ಮೋದಿಯವರು ಮತ್ತೆ ಪ್ರಧಾನಿಯಾಗುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ’

- Advertisement -

ಬೆಂಗಳೂರು : ಬಿಜೆಪಿ-ಜೆಡಿಎಸ್ ಮೈತ್ರಿ ನೂರಕ್ಕೆ ನೂರರಷ್ಟು ಆಗುತ್ತದೆ. ಕ್ಷೇತ್ರ ಹಂಚಿಕೆ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ ಎಂದು ಮಾಜಿ ಸಚಿವ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಜೆ.ಪಿ.ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗು ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಮೈತ್ರಿ ಆಗಲಿದೆ. ಆದರೆ ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ಆಗಿಲ್ಲ. ನಾವೂ ಕೇಳಿಲ್ಲ, ಅವರೂ ಹೇಳಿಲ್ಲ. ಸದ್ಯಕ್ಕೆ ನಮಗೆ ಕಾಂಗ್ರೆಸ್ ಪಕ್ಷವನ್ನು ದೂರವಿಡುವುದೇ ಗುರಿ. ಅದಕ್ಕಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಆಗಲಿದೆ ಎಂದರು.

- Advertisement -


ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ. ದೇಶದ ಜನ ಮೋದಿ ಪರವಾಗಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರೇ ಪ್ರಧಾನಿಯವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದರು.