ಸೋಮಣ್ಣ ಸೇರಿ ಯಾರೊಬ್ಬರೂ ಬಿಜೆಪಿ ಬಿಡುವುದಿಲ್ಲ, ಎಲ್ಲರೂ ನಮ್ಮ ಜೊತೆ ಇದ್ದಾರೆ: ಯಡಿಯೂರಪ್ಪ

Prasthutha|

ಯಾದಗಿರಿ: ಸೋಮಣ್ಣ ಸೇರಿ ಹಲವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವುದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಎಲ್ಲರೂ ನಮ್ಮ ಜೊತೆಯಲ್ಲಿಯೇ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣ ನಮ್ಮ ಜೊತೆಯಲ್ಲಿಯೇ ಇದ್ದಾರೆ. ಇರುತ್ತಾರೆ ಕೂಡಾ. ಬೆಂಗಳೂರಿಗೆ ಹೋದ ಮೇಲೆ ಎಲ್ಲರನ್ನೂ ಭೇಟಿ ಮಾಡಿ ಮಾತನಾಡುತ್ತೇನೆ. ಸೋಮಣ್ಣ ಸೇರಿ ಯಾರೊಬ್ಬರೂ ಬಿಜೆಪಿ ಬಿಡುವುದಿಲ್ಲ ಎಂದರು.


ಮಾಡಾಳ್ ವಿರೂಪಾಕ್ಷ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ವಾಸ್ತವಿಕ ಸ್ಥಿತಿ ಏನು ಎನ್ನುವುದು ನಿಮಗೇ ಗೊತ್ತಿದೆ. ಅದ್ದೂರಿ ಮೆರವಣಿಗೆ ಬಗ್ಗೆ ನಾನು ಯಾವುದೇ ಕಮೆಂಟ್ ಮಾಡುವುದಿಲ್ಲ. ಒಟ್ಟಿನಲ್ಲಿ ಅವರಿಗೆ ಕೋರ್ಟಿನಿಂದ ರಿಲೀಫ್ ಸಿಕ್ಕಿದೆ. ಮಾಡಾಳ್ ಅವರ ಮೇಲೆ ಪಕ್ಷದಿಂದ ಕ್ರಮ ಕೈಗೊಳ್ಳುವ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಹೇಳಿದರು.

Join Whatsapp