ಲಕ್ನೋ: ಉತ್ತರ ಪ್ರದೇಶದ ಬಿಜೆಪಿ ಆಡಳಿತದಲ್ಲಿ ಯಾರೂ ಸುರಕ್ಷಿತರಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಅವರು, ಇಂದು ಉತ್ತರಪ್ರದೇಶದಲ್ಲಿ ಯಾರೂ ಸುರಕ್ಷಿತರಲ್ಲ,ಮಹಿಳೆಯರು,ರೈತರು ಮತ್ತು ವಕೀಲರು ಕೂಡ ಸುರಕ್ಷಿತರಾಗಿಲ್ಲ” ಎಂದು ಹೇಳಿದ್ದಾರೆ. ಉತ್ತರಪ್ರದೇಶ ನ್ಯಾಯಾಲಯದಲ್ಲಿ ವಕೀಲರೊಬ್ಬರನ್ನು ಗುಂಡಿಕ್ಕಿ ಹತ್ಯೆಗೈದ ಹಿನ್ನೆಲೆಯಲ್ಲಿ ಪ್ರಿಯಾಂಕಾ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ.
“ನ್ಯಾಯಾಂಗವು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ. ಶಹಜಹಾನ್ ಪುರದಲ್ಲಿ ಹಾಡುಹಗಲೇ ನ್ಯಾಯಾಲಯದ ಆವರಣದಲ್ಲಿ ನಡೆದ ವಕೀಲರ ಬರ್ಬರ ಹತ್ಯೆ ಯಾರೂ ಸುರಕ್ಷಿತರಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ. ಇಂದು ಉತ್ತರಪ್ರದೇಶದಲ್ಲಿ ಯಾರೂ ಸುರಕ್ಷಿತರಲ್ಲ, ಮಹಿಳೆಯರು ಮತ್ತು ರೈತರು ಮಾತ್ರವಲ್ಲ, ವಕೀಲರು ಕೂಡ ಎಂದು ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ.