ಯಾರೂ ಬಿಜೆಪಿ ಬಿಡುವುದಿಲ್ಲ: ಬೊಮ್ಮಾಯಿ

Prasthutha|

ಬೆಂಗಳೂರು: ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ಕಮಿಷನ್ ದಂಧೆಯ ವಿರುದ್ಧ ಕೇಳಿ ಬರುತ್ತಿರುವ ಆರೋಪದ ಗಮನ ಬೇರೆಡೆ ಸೆಳೆಯಲು ಬಿಜೆಪಿ ಶಾಸಕರ ಪಕ್ಷಾಂತರದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

- Advertisement -


‘ಎಸ್.ಟಿ.ಸೋಮಶೇಖರ್, ಶಿವರಾಂ ಹೆಬ್ಬಾರ್ ಜತೆ ಮಾತನಾಡಿದ್ದೇನೆ. ಬಿಜೆಪಿಯ ಯಾವುದೇ ಶಾಸಕರು ಪಕ್ಷ ತೊರೆಯುವುದಿಲ್ಲ. ಶಾಸಕರು ಸ್ಥಳೀಯವಾಗಿರುವ ಸಮಸ್ಯೆಗಳನ್ನು ಹೇಳಿದ್ದಾರೆ. ಅದನ್ನು ರಾಜ್ಯಾಧ್ಯಕ್ಷರ ಗಮನಕ್ಕೆ ತಂದಿದ್ದೇನೆ. ನಾವೆಲ್ಲರೂ ಒಗ್ಗಟ್ಟಾಗಿ ದ್ದೇವೆ. ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರ, ಸ್ವಜನ ಪಕ್ಷಪಾತದ ವಿರುದ್ಧ ಅವರ ಶಾಸಕರೇ ದಂಗೆ ಎದ್ದಿರುವುದನ್ನು ಮರೆ ಮಾಚಲು ಪಕ್ಷಾಂತರದ ಸುಳ್ಳು ಕತೆ ಕಟ್ಟುತ್ತಿದ್ದಾರೆ’ ಎಂದರು.

Join Whatsapp