ನವದೆಹಲಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಚುನಾವಣೆಗೆ ಸ್ಪರ್ಧೆ ನಡೆಸಲು ಯಾವುದೇ ನಾಯಕನ ಅನುಮತಿ ಪಡೆಯಬೇಕಾಗಿಲ್ಲ ಎಂದು ಪಕ್ಷ ಸ್ಪಷ್ಟಪಡಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್’ನ ಹಿರಿಯ ಮುಖಂಡ ಜೈರಾಮ್ ರಮೇಶ್, ಪಕ್ಷದ ಅಧ್ಯಕ್ಷಗಾದಿಗೆ ನಡೆಯುವ ಚುನಾವಣೆಯಲ್ಲಿ ಯಾರೂ ಬೇಕಾದರೂ ಸ್ಪರ್ಧೆ ನಡೆಸಬಹುದು. ಇದಕ್ಕಾಗಿ ಯಾವುದೇ ನಾಯಕನ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಪಕ್ಷದ ಅಧ್ಯಕ್ಷ ಚುನಾವಣೆಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಶಶಿ ತರೂರ್ ಅವರ ಹೆಸರು ಮುಂಚೂಣಿಯಲ್ಲಿರುವ ಮಧ್ಯೆ ಜೈರಾಮ್ ರಮೇಶ್ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.
ಕಾಂಗ್ರೆಸ್ ಪಕ್ಷದ ಮುಂದಿನ ಅಧ್ಯಕ್ಷರನ್ನು ಅಕ್ಟೋಬರ್’ನಲ್ಲಿ ಆಯ್ಕೆ ಮಾಡಲು ವೇದಿಕೆ ಸಿದ್ಧವಾಗಿದೆ. ಈ ಚುನಾವಣೆಯಲ್ಲಿ ಹಿರಿಯ ಮುಖಂಡರಾದ ಶಶಿ ತರೂರ್ ಮತ್ತು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸ್ಪರ್ಧಿಸಲಿದ್ದಾರೆ ಎಂದು ಊಹಿಸಲಾಗಿದೆ.
ಕಾಂಗ್ರೆಸ್ ಪಕ್ಷದ ಮುಂದಿನ ಅಧ್ಯಕ್ಷರಿಗೆ 2024ರ ಸಾರ್ವತ್ರಿಕ ಚುನಾವಣೆಗೂ ಮೊದಲು ಪಕ್ಷವನ್ನು ಸಂಘಟಿಸುವ ಸವಾಲುಗಳು ಇವೆ. ಇದಕ್ಕಾಗಿ ಗುರುವಾರದಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಲಿದೆ.