ಆನ್ ಲೈನ್ ತರಗತಿಗಳು ಇರುತ್ತವೆ, ಆದರೆ ಆನ್ ಲೈನ್ ಪರೀಕ್ಷೆ ಸಾಧ್ಯವಿಲ್ಲ : ಡಿಸಿಎಂ ಡಾ. ಸಿ ಎನ್ ಅಶ್ವತ್ಥನಾರಾಯಣ

Prasthutha: April 12, 2021

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷ (2021-22)ದಲ್ಲಿ ಮೊದಲು ಆನ್ ಲೈನ್ ತರಗತಿಗಳನ್ನು ಆರಂಭ ಮಾಡಲಾಗುವುದು. ಆದರೆ, ಆನ್ ಲೈನ್ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಸೋಮವಾರ ಕೋವಿಡ್ ಹಿನ್ನಲೆಯಲ್ಲಿ ನಡೆದ ಸಭೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಆನ್ ಲೈನ್ ಪರೀಕ್ಷೆ ನಡೆಸಬೇಕೆಂದು ವಿದ್ಯಾರ್ಥಿ-ಪೋಷಕರು ಬೇಡಿಕೆ ಇಡುತ್ತಿದ್ದಾರೆ. ನಮ್ಮ ವ್ಯವಸ್ಥೆಯಲ್ಲಿ ಅದು ಸಾಧ್ಯವಿಲ್ಲ. ಪರೀಕ್ಷೆ ಏನಿದ್ದರೂ ಆಫ್ ಲೈನ್ ನಲ್ಲಿ ನಡೆಯುತ್ತದೆ. ಕೆಲ ಡೀಮ್ಡ್ ವಿಶ್ವವಿದ್ಯಾಲಯಗಳು ಆನ್ ಲೈನ್ ಪರೀಕ್ಷೆ ಮಾಡಿಕೊಳ್ಳುತ್ತಿವೆ. ನಮ್ಮಲ್ಲಿ ಮಾತ್ರ ಇದಕ್ಕೆ ಅವಕಾಶವಿಲ್ಲ” ಎಂದರು.

ಸದ್ಯಕ್ಕೆ ಬಸ್ ಮುಷ್ಕರದಿಂದ ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ಎಂಜಿನಿಯರಿಂಗ್ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಕೊಂಚ ವ್ಯತ್ಯಯವಾಗಿದೆ. ಮುಷ್ಕರ ನಿಂತ ಕೂಡಲೇ ಪರೀಕ್ಷೆಗಳು ಶುರುವಾಗುತ್ತವೆ ಎಂದರು ಅವರು.

ಸೋಂಕು ನಿಯಂತ್ರಣಕ್ಕೆ ಬಂದ ಮೇಲೆ ಆಫ್ ಲೈನ್ ತರಗತಿಗಳನ್ನೂ ಆರಂಭ ಮಾಡಲಾಗುವುದು. ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಆಫ್ ಲೈನ್ ಅಥವಾ ಆನ್ ಲೈನ್ ಕ್ಲಾಸ್ ಗಳನ್ನು ಆಯ್ಕೆ ಮಾಡಿಕೊಳ್ಳಬಹದು. ಆದರೆ, ಎರಡರಲ್ಲಿ ಯಾವುದಾದರೂ ಒಂದರಲ್ಲಿ ಹಾಜರಾತಿ ಕಡ್ಡಾಯ ಎಂದು ಡಿಸಿಎಂ ಸ್ಪಷ್ಟಪಡಿಸಿದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!