ಹಿಜಾಬ್ ಬಗ್ಗೆ ಪಕ್ಷದ ಯಾರೂ ಬಹಿರಂಗ ಹೇಳಿಕೆ ನೀಡಬಾರದು: ಡಿ.ಕೆ.ಶಿವಕುಮಾರ್

Prasthutha|

ಬೆಂಗಳೂರು: ಹಿಜಾಬ್ ಬಗ್ಗೆ ಪಕ್ಷದಲ್ಲಿ ಯಾರೂ ಕೂಡ ಬಹಿರಂಗ ಹೇಳಿಕೆ ನೀಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

- Advertisement -

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಈಗಾಗಲೇ ಪ್ರಕರಣ ಕೋರ್ಟ್ ನಲ್ಲಿದೆ. ಕೋರ್ಟ್ ನಲ್ಲಿ ಇರುವಾಗ ಪಕ್ಷದ ಅಧ್ಯಕ್ಷನಾಗಿ ಅಭಿಪ್ರಾಯ ಹೇರುವುದಕ್ಕೆ ಆಗುವುದಿಲ್ಲ. ಇದು ಬಹಿರಂಗ ಚರ್ಚೆ ವಿಚಾರ ಅಲ್ಲ ನಮ್ಮ ಚೌಕಟ್ಟಿನಲ್ಲಿ ಪ್ರತಿಕ್ರಿಯಿಸುತ್ತೇವೆ ಎಂದು ತಿಳಿಸಿದರು.

  ‘ನಾನು ಈ ವಿಚಾರವಾಗಿ ಸ್ಥಳೀಯ ನಾಯಕರ ಜತೆ ಚರ್ಚೆ ಮಾಡಬೇಕಾಗಿದೆ. ಮೊದಲಿನಿಂದ ಆಚರಿಸಿಕೊಂಡು ಬಂದ ಪದ್ಧತಿ, ಸಂಸ್ಕೃತಿ, ಇತಿಹಾಸ, ಕಾನೂನು ಎಲ್ಲವನ್ನೂ ಚರ್ಚಿಸಬೇಕಾಗಿದೆ. ನಾನು ಈ ವಿಚಾರವನ್ನು ಗಮನಿಸುತ್ತಿದ್ದೇನೆ. ನ್ಯಾಯಾಲಯ ಈಗಾಗಲೇ ಮಧ್ಯ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ನಾನು ಪಕ್ಷದ ಅಧ್ಯಕ್ಷನಾಗಿ ಮಾತನಾಡುವುದು ಸರಿಯಾಗುವುದಿಲ್ಲ. ಎಲ್ಲರಿಗೂ ಅವರದೇ ಆದ ಜೀವನ ಪದ್ಧತಿ, ಸಂಸ್ಕೃತಿ ಇರುವುದನ್ನು ಚರ್ಚಿಸಬೇಕಿದೆ. ಇದು ಬಹಿರಂಗ ಚರ್ಚೆ ಮಾಡುವ ವಿಚಾರವಲ್ಲ. ಮಕ್ಕಳು, ಧಾರ್ಮಿಕ ಆಚರಣೆಯಂತಹ ಸೂಕ್ಷ್ಮ ವಿಚಾರವಿರುವುದರಿಂದ ಈ ಬಗ್ಗೆ ಒಂದು ಚೌಕಟ್ಟಿನಲ್ಲಿ ಚರ್ಚೆ ಮಾಡಬೇಕಿದೆ ಎಂದರು.

- Advertisement -

‘ವಿಧಾನ ಪರಿಷತ್ ಪದವೀಧರರು, ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಾಲ್ಕು ಕ್ಷೇತ್ರಗಳ ಪೈಕಿ ಈಗಾಗಲೇ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ. ಮಧು ಮಾದೇಗೌಡರು ಹಾಗೂ ಧಾರವಾಡದ ಗುರಿಕಾರ್ ಅವರ ಹೆಸರನ್ನು ಎಐಸಿಸಿ ಅಂತಿಮಗೊಳಿಸಿದೆ. ಬೆಳಗಾವಿ, ಬಾಗಲಕೋಟೆ, ಬಾದಾಮಿ, ಬಿಜಾಪುರದ ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರದ ತಲಾ ಒಬ್ಬರು ಅಭ್ಯರ್ಥಿ ಆಯ್ಕೆ ಸಂಬಂಧ ನಾಯಕರ ಜತೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗಿದೆ.

ಪದವೀಧರ ಕ್ಷೇತ್ರಕ್ಕೆ ಆರು ಮಂದಿ ಅರ್ಜಿ ಹಾಕಿದ್ದು, ಶಿಕ್ಷಕರ ಕ್ಷೇತ್ರಕ್ಕೆ 15ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿರುವ ಹಿನ್ನೆಲೆಯಲ್ಲಿ ಎಲ್ಲರ ಅಭಿಪ್ರಾಯ ಪಡೆಯುವುದು ಮುಖ್ಯ. ಇಂದಿನ ಸಭೆಯಲ್ಲಿ ಎಲ್ಲರೂ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಕೆಲವು ನಾಯಕರು ಗೋವಾ ಚುನಾವಣಾ ಪ್ರಚಾರಕ್ಕೆ ತೆರಳಿದ್ದು, ಮುಂದಿನ ಕೆಲ ದಿನಗಳಲ್ಲಿ ಅವರು ಬಂದ  ನಂತರ ಚರ್ಚಿಸಿ, ನಮ್ಮ ಶಿಫಾರಸ್ಸನ್ನು ದೆಹಲಿಗೆ ಕಳುಹಿಸಿಕೊಡುತ್ತೇವೆ.

Join Whatsapp