ರಾಜಕೀಯ ಪಕ್ಷಗಳು ಪ್ರಣಾಳಿಕೆಗಳನ್ನು ಜಾರಿಗೆ ತರದಿದ್ದರೆ ದಂಡ ವಿಧಿಸಲು ಸಾಧ್ಯವಿಲ್ಲ: ಅಲಹಾಬಾದ್ ಕೋರ್ಟ್

Prasthutha|

ಅಲಹಾಬಾದ್: ರಾಜಕೀಯ ಪಕ್ಷಗಳು ಚುನಾವಣೆಯ ವೇಳೆ ತನ್ನ ಪ್ರಣಾಳಿಕೆಯಲ್ಲಿ ನಮೂದಿಸಿದ ಅಂಶಗಳನ್ನು ಈಡೇರಿಸದಿದ್ದರೆ ದಂಡ ವಿಧಿಸಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತಿಳಿಸಿದೆ.

- Advertisement -

2014 ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಪ್ರಣಾಳಿಕೆಯಲ್ಲಿ ನಮೂದಿಸಿದ ಅಂಶಗಳನ್ನು ಈಡೇರಿಸದ ಬಿಜೆಪಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರಿ ಅಲಹಾಬಾದ್ ಹೈಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು.

ಈ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಅಲಹಾಬಾದ್ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿದ್ದು, ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ ರಾಜಕೀಯ ಪಕ್ಷಗಳ ಮೇಲೆ ದಂಡ ವಿಧಿಸಲು ಸಾಧ್ಯವಿಲ್ಲ ಎಂದು ತನ್ನ ತೀರ್ಪಿನಲ್ಲಿ ತಿಳಿಸಿದೆ.

- Advertisement -

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೀಡಿದ್ದ ಭರವಸೆಗಳನ್ನು ಈಡೇರಿಸಲು ವಿಫಲವಾರ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರಿ ಖುರ್ಷಿದ್ ಉರ್ ರಹ್ಮಾನ್ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಕೆಳ ನ್ಯಾಯಾಲಯವು ಇವರ ಮನವಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಅವರು ಅಲಹಾಬಾದ್ ಹೈಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಈ ಮಧ್ಯೆ ಚುನಾವಣಾ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರವನ್ನು ಅಳವಡಿಸಿಕೊಂಡಿದ್ದಕ್ಕಾಗಿ ರಾಜಕೀಯ ಪಕ್ಷವನ್ನು ಜನಪ್ರತಿನಿಧಿ ಕಾಯ್ದೆ 1951 ರ ಅನ್ವಯ ಜವಾಬ್ದಾರಿಯನ್ನಾಗಿ ಪರಿಗಣಿಸಲಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.



Join Whatsapp