ಬೆಂಗಳೂರು : ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ದೇವಸ್ಥಾನಗಳಲ್ಲಿ ಮಾತ್ರ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ ಎಂದು ನಗರ ಪೊಲೀಸ್ ಅಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಸರಕಾರದ ನಿಯಮಗಳನ್ವಯ ಮನೆ-ದೇವಸ್ಥಾನಗಳಲ್ಲಿ ಮೂರ್ತಿ ಪ್ರತಿಷ್ಠಾಪಿಸಲು ಅವಕಾಶವಿದೆ. ಆದರೆ ರಸ್ತೆ, ಬೀದಿಗಳಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶವಿಲ್ಲ ಎಂದು ಹೇಳಿದ್ದಾರೆ.
ಈಗಾಗಲೇ ನಗರದಲ್ಲಿ ಕೋವಿಡ್ ನಿಯಮಗಳು ಜಾರಿಯಲ್ಲಿದ್ದು ಅದನ್ನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ, ಸದ್ಯದ ನಿಯಮಗಳ ಪ್ರಕಾರ, ಸಾರ್ವಜನಿಕ ರಸ್ತೆಯಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಯಾವುದೇ ಅವಕಾಶ ನೀಡಿಲ್ಲ ಎಂದರು.ದೇವಸ್ಥಾನದಲ್ಲಿ ಮೂರ್ತಿ ಪ್ರತಿಷ್ಠಾಪನೆಗೂ ಮುನ್ನ ಪೊಲೀಸರು ಹಾಗೂ ಬಿಬಿಎಂಪಿ ಅವರಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.