Home ಟಾಪ್ ಸುದ್ದಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಒಂದಿಷ್ಟು ದಿನ ಅನುಮತಿ ಇಲ್ಲ: ಸಚಿವ ಮುನಿಯಪ್ಪ

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಒಂದಿಷ್ಟು ದಿನ ಅನುಮತಿ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಹೊಸ ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಇನ್ನೂ ಒಂದಿಷ್ಟು ದಿನ ಅನುಮತಿ ಇಲ್ಲ. ಕಾರಣ ಏನು ಅಂತ ಸದ್ಯದರಲ್ಲೇ ಹೇಳುತ್ತೇನೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.

ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸುಧಾಮ್ ದಾಸ್ ಗೆ ಎಂಎಲ್ ಸಿ ಸ್ಥಾನ ನೀಡುವುದನ್ನು ವಿರೋಧಿಸಿ ಪತ್ರ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿರುವುದು ನಿಜ ಎಂದರು.


ಸುಧಾಮ್ ದಾಸ್ ಈಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇನ್ನೊಂದಿಷ್ಟು ದಿನಗಳ ಕಾಲ ಸುಧಾಮ್ ದಾಸ್ ಪಕ್ಷಕ್ಕೆ ಕೆಲಸ ಮಾಡಲಿ. ಪಕ್ಷಕ್ಕೆ ದುಡಿದ ದಲಿತ ನಾಯಕರಿಗೆ ಅವಕಾಶ ನೀಡಲಿ ಎಂಬುದಷ್ಟೇ ಸಲಹೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಯಲ್ಲಿ ಪತ್ರ ಬರೆದಿರುವುದು ಸತ್ಯ. ಅಂತಿಮವಾಗಿ ನಮ್ಮ ಹೈಕಮಾಂಡ್ ನಾಯಕರು ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು.

Join Whatsapp
Exit mobile version