ಅ.25ರಿಂದ ‘ಪಿಯುಸಿ’ ಪ್ರಮಾಣ ಪತ್ರ ಇಲ್ಲದೆ ದೆಹಲಿಯಲ್ಲಿ ಪೆಟ್ರೋಲ್, ಡೀಸೆಲ್ ಇಲ್ಲ: ಸಚಿವ ಗೋಪಾಲ್ ರಾಯ್

Prasthutha|

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ದೆಹಲಿಯಲ್ಲಿ ಅಕ್ಟೋಬರ್ 25 ರಿಂದ ಪೆಟ್ರೋಲ್ ಪಂಪ್ ಗಳಲ್ಲಿ ಪಿಯುಸಿ ಪ್ರಮಾಣ ಪತ್ರವಿಲ್ಲದೆ ಪೆಟ್ರೋಲ್, ಡೀಸೆಲ್ ಅನ್ನು ನೀಡದಿರಲು ದೆಹಲಿ ಸರಕಾರ ನಿರ್ಧರಿಸಿದೆ ಎಂದು ದೆಹಲಿಯ ಪರಿಸರ ಸಚಿವ ಗೋಪಾಲ್ ರಾಯ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ಹೆಚ್ಚುತ್ತಿರುವ ಮಾಲಿನ್ಯಕ್ಕೆ ವಾಹನಗಳ ಹೊಗೆ ಪ್ರಮುಖ ಕಾರಣವಾಗಿದೆ. ಅದನ್ನು ಕಡಿಮೆ ಮಾಡುವುದು ಅನಿವಾರ್ಯವಾಗಿದೆ. ಆದ್ದರಿಂದ ಅಕ್ಟೋಬರ್ 25 ರಿಂದ ವಾಹನಕ್ಕೆ ಪಿಯುಸಿ ಪ್ರಮಾಣಪತ್ರವಿಲ್ಲದಿದ್ದರೆ ಪೆಟ್ರೋಲ್ ಪಂಪ್ ಗಳಲ್ಲಿ ಪೆಟ್ರೋಲ್, ಡೀಸೆಲ್ ನೀಡದಿರಲು ನಿರ್ಧರಿಸಲಾಗಿದೆ’ ಎಂದು ರೈ ತಿಳಿಸಿದರು.
ಪಿಯುಸಿ ಎಂದರೆ ‘ಪೊಲ್ಯುಷನ್ ಅಂಡರ್ ಕಂಟ್ರೋಲ್’ ಅಂದರೆ, ವಾಹನದ ‘ಮಾಲಿನ್ಯ ನಿಯಂತ್ರಣದಲ್ಲಿದೆ’ ಎಂಬುದಕ್ಕೆ ಸಂಬಂಧಿಸಿದ ಪ್ರಮಾಣ ಪತ್ರವಾಗಿದೆ.
ನಿಯಮದ ಅನುಷ್ಠಾನ ಮತ್ತು ಕಾರ್ಯವಿಧಾನಗಳ ಬಗ್ಗೆ ಚರ್ಚಿಸಲು ಸೆಪ್ಟೆಂಬರ್ 29 ರಂದು ಕರೆಯಲಾಗಿದ್ದ ಪರಿಸರ, ಸಾರಿಗೆ ಮತ್ತು ಸಂಚಾರ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಅದರಂತೆ ಅಕ್ಟೋಬರ್ 25 ರಿಂದ ನಿಯಮ ಜಾರಿಗೆ ಬರಲಿದೆ. ಇದಕ್ಕೆ ಸಂಬಂಧಿಸಿದ ಅಧಿಸೂಚನೆಯನ್ನೂ ಶೀಘ್ರದಲ್ಲೇ ಹೊರಡಿಸಲಾಗುವುದು ಎಂದರು.



Join Whatsapp