ಯಾವ ಪ್ರಧಾನಿಯೂ ಘನತೆ ಬಿಟ್ಟು ನಡೆದುಕೊಂಡಿರಲಿಲ್ಲ: ಪ್ರಿಯಾಂಕ ಗಾಂಧಿ

Prasthutha|

ಚಿತ್ರದುರ್ಗ: ದೇಶದ ರಾಜಕೀಯ ಪರಂಪರೆ ಘನತೆಯಿಂದ ಕೂಡಿತ್ತು. ಈವರೆಗಿನ ಯಾವ ಪ್ರಧಾನಿ ಕೂಡ ಘನತೆ ಬಿಟ್ಟು ನಡೆದುಕೊಂಡಿರಲಿಲ್ಲ. ಈಗಿನ ಪ್ರಧಾನಿ ಸ್ಥಾನದಲ್ಲಿರುವ ರಾಜಕೀಯ ನಾಯಕ ಅಹಂಕಾರದಿಂದ, ಅಧಿಕಾರದ ದರ್ಪದಿಂದ ನಡೆದುಕೊಳ್ಳುತ್ತಿದ್ದಾರೆ, ವೈಭೋಗದ ಜೀವನ ನಡೆಸುತ್ತಿದ್ದಾರೆ. ಶ್ರೀರಾಮನ ಹೆಸರು ಹೇಳುತ್ತಾ ನೈತಿಕತೆ ಬಿಟ್ಟು ನಾಟಕ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸ್ಟಾರ್ ಪ್ರಚಾರಕಿ ಪ್ರಿಯಾಂಕ‌ ಗಾಂಧಿ ಹೇಳಿದ್ದಾರೆ.

- Advertisement -

ಚಿತ್ರದುರ್ಗದಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ‘ನ್ಯಾಯ ಸಂಕಲ್ಪ ರ‍್ಯಾಲಿ’ಯಲ್ಲಿ ಮಾತನಾಡಿದ ಪ್ರಿಯಾಂಕ, ಹಿಂದೂ ಪರಂಪರೆಯಲ್ಲಿ ನಾಯಕರನ್ನು ಸತ್ಯದ ದಾರಿ, ಸೇವಾ ಮನೋಭಾವದಲ್ಲಿ ಕಾಣುತ್ತೇವೆ. ಶ್ರೀರಾಮ ಕೂಡ ಇದೇ ಮಾರ್ಗದಲ್ಲಿ ನಡೆದುಕೊಂಡಿದ್ದರು. ಹತ್ತು ವರ್ಷಗಳಿಂದ ದೇಶದ ಪ್ರಧಾನಿಯಾಗಿರುವ ನರೇಂದ್ರ ಮೊದಿ ಇದಕ್ಕೆ ತದ್ವಿರುದ್ಧವಾಗಿ ಆಡಳಿತ ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮೋದಿ ಅವರು ನಿಜವಾಗಿಯೂ ಹತ್ತು ವರ್ಷ ಕೆಲಸ ಮಾಡಿದ್ದರೆ ಅಭಿವೃದ್ಧಿ ಆಧಾರದ ಮೇಲೆ ಮತ ಕೇಳುತ್ತಿದ್ದರು. ಜಾತಿ, ಧರ್ಮ ಮುಂದಿಟ್ಟುಕೊಂಡು ಮತಯಾಚನೆಗೆ ಬರುತ್ತಿರಲಿಲ್ಲ. ಪ್ರಧಾನಿ ಹುದ್ದೆಯಲ್ಲಿದ್ದವರು ಜನರ ಬಳಿಗೆ ಬರುತ್ತಿದ್ದರು. ಹಳ್ಳಿಯ ಜನರ ಸಂಕಷ್ಟಕ್ಕೆ ಮಿಡಿಯುತ್ತಿದ್ದರು. ಒಂದು ಪತ್ರ ಬರೆದರೂ ಪ್ರಧಾನಿ ಸ್ಪಂದಿಸುತ್ತಿದ್ದರು. ಈಗಿನವರಂತೆ ಸಿಟ್ಟು ಮಾಡಿಕೊಳ್ಳುತ್ತಿರಲಿಲ್ಲ ಎಂದು ರಾಹುಲ್ ಗಾಂಧಿ ಸಹೋದರಿ ಹೇಳಿದರು.

- Advertisement -

ಕೇಂದ್ರ ಸರ್ಕಾರ ಅಥವಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸುವ ವಿರೋಧ ಪಕ್ಷಗಳ ಧ್ವನಿ ಅಡಗಿಸಲಾಗುತ್ತಿದೆ. ಇಬ್ಬರು ಮುಖ್ಯಮಂತ್ರಿಗಳನ್ನು ಬಂಧಿಸಿಲಾಗಿದೆ. ಕಾಂಗ್ರೆಸ್‌ ಬ್ಯಾಂಕ್‌ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣಾ ಬಾಂಡ್‌ ನೆಪದಲ್ಲಿ ಖಾಸಗಿ ಕಂಪನಿಗಳಿಂದ ನರೇಂದ್ರ ಮೋದಿ ದೇಣಿಗೆ ವಸೂಲಿ ಮಾಡಿದ್ದಾರೆ. ಕೇಂದ್ರ ಸರ್ಕಾರಕ್ಕೆ ಹೆದರಿದ ಅನೇಕ ಕಂಪನಿಗಳು ಲಾಭಾಂಶಕ್ಕಿಂತ ಹೆಚ್ಚಿನ ಪಾಲನ್ನು ಬಿಜೆಪಿಗೆ ದೇಣಿಗೆ ನೀಡಿವೆ. ಸುಪ್ರೀಂ ಕೋರ್ಟ್‌ ಮಧ್ಯಪ್ರವೇಶದಿಂದ ದೇಣಿಗೆ ನೀಡಿದವರ ಹೆಸರು ಬೆಳಕಿಗೆ ಬಂದಿದೆ. ಇದು ದೊಡ್ಡ ಭ್ರಷ್ಟಾಚಾರವಾಗಿದೆ ಎಂದು ಕಾಂಗ್ರೆಸ್ ನಾಯಕಿ ಹೇಳಿದರು.

Join Whatsapp