Home ಟಾಪ್ ಸುದ್ದಿಗಳು ಕಾಂಗ್ರೆಸ್ ಸರ್ಕಾರದಿಂದ ಯಾವುದೇ ರೈತಪರ ಯೋಜನೆ ಇಲ್ಲ: ಸ್ವಪಕ್ಷದ ವಿರುದ್ಧ ಶಾಸಕ ರಾಜು ಕಾಗೆ ವಾಗ್ದಾಳಿ

ಕಾಂಗ್ರೆಸ್ ಸರ್ಕಾರದಿಂದ ಯಾವುದೇ ರೈತಪರ ಯೋಜನೆ ಇಲ್ಲ: ಸ್ವಪಕ್ಷದ ವಿರುದ್ಧ ಶಾಸಕ ರಾಜು ಕಾಗೆ ವಾಗ್ದಾಳಿ

ಬೆಳಗಾವಿ: ರೈತರ ಪರ ಯಾವುದೇ ಯೋಜನೆಗಳು ಬರುತ್ತಿಲ್ಲ. ರೈತರು ಬದುಕು ದುಸ್ತರವಾಗಿದೆ ಎಂದು ತಮ್ಮದೇ ಸರ್ಕಾರದ ವಿರುದ್ಧ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ಹರಿಹಾಯ್ದಿದ್ದಾರೆ.

ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ತಾವಂಶಿ ಗ್ರಾಮದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ರೈತರು ಒಂದು ವರ್ಷ ಬೆಳೆಗಳನ್ನು ಬೆಳೆಯುವುದನ್ನು ಬಿಟ್ಟರೆ ನೀವೇನು ತಿಂತೀರಿ? ನಿಮ್ಮ ಬಳಿ ರೊಕ್ಕ, ಬಂಗಾರ ಬೆಳ್ಳಿ ಸಾಕಷ್ಟು ಇರಬಹುದು. ಆದ್ರೆ ಅದನ್ನು ತಿಂದು ಬದುಕೋಗಾಗುತ್ತಾ? ಮೊದಲು ರೈತರನ್ನು ಬದುಕಿಸುವ ಕೆಲಸ ಮಾಡಿ. ರೈತರು ಬದುಕಿದ್ರೆ ಮಾತ್ರ ಈ ದೇಶ ಪ್ರಗತಿ ಹೊಂದಲು ಸಾಧ್ಯವಿದೆ ಎಂದರು.

ಕಳೆದ ಒಂದು ವರ್ಷದಿಂದ ನನ್ನ ಗೋಳನ್ನು ಸರ್ಕಾರ ಆಲಿಸುತ್ತಿಲ್ಲ. ಹೀಗೆ ಪರಿಸ್ಥಿತಿ ಮುಂದುವರಿದ್ರೆ ವಿಧಾನಸೌಧದಲ್ಲೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಓರ್ವ ಮಂತ್ರಿಗೆ ಹೇಳಿದೆ. ಆದರೆ ನೀನ್ಯಾಕೆ ಆತ್ಮಹತ್ಯೆ ಮಾಡಿಕೊಳ್ತಿಯಾ ನಿನ್ನ ಕೆಲಸ ಮಾಡಿಕೊಡ್ತಿವಿ ಅಂತಾ ಹೇಳಿದ ಮಂತ್ರಿಗಳಿದ್ದಾರೆ. ಅನುದಾನ ನೀಡದ ಸ್ವಪಕ್ಷೀಯ ಸಚಿವರ ವಿರುದ್ಧ ಕಿಡಿಕಾರಿದರು.

Join Whatsapp
Exit mobile version